ಇನ್ಮುಂದೆ ಕುಂಸಿ, ಅರಸಾಳು ನಿಲ್ದಾಣಗಳಲ್ಲಿ ಸ್ಟಾಪ್‌ ಕೊಡಲಿವೆ 4 ಎಕ್ಸ್‌ಪ್ರೆಸ್‌ ರೈಲುಗಳು, ಯಾವ ರೈಲು? ಟೈಮಿಂಗ್‌ ಏನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 AUGUST 2023

SHIMOGA : ಕುಂಸಿ (Kumsi)  ಮತ್ತು ಅರಸಾಳು (Arasalu) ನಿಲ್ದಾಣಗಳಲ್ಲಿ ಎರಡು ಎಕ್ಸ್‌ಪ್ರೆಸ್‌ ರೈಲುಗಳ (Express Trains) ನಿಲುಗಡೆಗೆ ನೈಋತ್ಯ ರೈಲ್ವೆ ಒಪ್ಪಿಗೆ ನೀಡಿದೆ. ಆ.24ರಿಂದ ರೈಲುಗಳು ಈ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿವೆ. ಸದ್ಯದಲ್ಲೆ ರೈಲ್ವೆ ಇಲಾಖೆ ಅಧಿಕೃತ ವೇಳಾಪಟ್ಟಿ ಬಿಡುಗಡೆ ಮಾಡಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಾವ್ಯಾವ ರೈಲುಗಳ ನಿಲುಗಡೆ?

ರೈಲು ಸಂಖ್ಯೆ 16205 : ತಾಳಗುಪ್ಪ – ಮೈಸೂರು ಎಕ್ಸ್ ಪ್ರೆಸ್ ರೈಲು – ಅರಸಾಳು ನಿಲ್ದಾಣದಲ್ಲಿ ಸಂಜೆ 4.03ಕ್ಕೆ ಮತ್ತು ಕುಂಸಿ ರೈಲು ನಿಲ್ದಾಣದಲ್ಲಿ ಸಂಜೆ 4.21ಕ್ಕೆ ನಿಲುಗಡೆ ಮಾಡಲಾಗುವುದು.

ಇದನ್ನೂ ಓದಿ – ಶಿವಮೊಗ್ಗ – ಬೆಂಗಳೂರು ಮಧ್ಯೆ ಸಂಚರಿಸುತ್ತಾ ವಂದೇ ಭಾರತ್‌ ರೈಲು? ಸಂಸದ ರಾಘವೇಂದ್ರ ಮೀಟಿಂಗ್‌, ಏನೇನು ಚರ್ಚೆಯಾಯ್ತು?

ರೈಲು ಸಂಖ್ಯೆ 16206 : ಮೈಸೂರು – ತಾಳಗುಪ್ಪ ಎಕ್ಸ್ ಪ್ರೆಸ್ ರೈಲು – ಕುಂಸಿ ನಿಲ್ದಾಣದಲ್ಲಿ ಬೆಳಿಗ್ಗೆ 11.31ಕ್ಕೆ  ಮತ್ತು ಅರಸಾಳು ರೈಲು ನಿಲ್ದಾಣದಲ್ಲಿ 11.48ಕ್ಕೆ ನಿಲುಗಡೆ ಮಾಡಲಾಗುವುದು.

ರೈಲು ಸಂಖ್ಯೆ 16228 : ತಾಳಗುಪ್ಪ – ಮೈಸೂರು ಎಕ್ಸ್ ಪ್ರೆಸ್ ರೈಲು – ಅರಸಾಳು ರೈಲು ನಿಲ್ದಾಣದಲ್ಲಿ ರಾತ್ರಿ 10.05 ಕ್ಕೆ ನಿಲುಗಡೆ ಮಾಡಲಾಗುವುದು.

ರೈಲು ಸಂಖ್ಯೆ 16227 : ಮೈಸೂರು – ತಾಳಗುಪ್ಪ ಎಕ್ಸ್ ಪ್ರೆಸ್ ರೈಲು – ಅರಸಾಳು ರೈಲು ನಿಲ್ದಾಣದಲ್ಲಿ ಬೆಳಿಗ್ಗೆ 5.45 ಕ್ಕೆ ನಿಲುಗಡೆ ಮಾಡಲಾಗುವುದು.

ಹಾರನಹಳ್ಳಿಯಲ್ಲಿ ಸದ್ಯಕ್ಕಿಲ್ಲ ನಿಲುಗಡೆ

ಹುಬ್ಬಳ್ಳಿಯಲ್ಲಿ ಮೇ ತಿಂಗಳಲ್ಲಿ ನಡೆದ ಸಭೆ ವೇಳೆ ಕುಂಸಿ, ಅರಸಾಳು ಮತ್ತು ಹಾರನಹಳ್ಳಿಯಲ್ಲಿ ರೈಲು ನಿಲುಗಡೆಗೆ ಒತ್ತಾಯಿಸಲಾಗಿತ್ತು. ಈ ಸಂಬಂಧ ನೈಋತ್ಯ ರೈಲ್ವೆ ವಲಯದಿಂದ ರೈಲ್ವೆ ಬೋರ್ಡ್‌ಗೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಅದರಂತೆ ನಾಲ್ಕು ರೈಲುಗಳು ಕುಂಸಿ ಮತ್ತು ಅರಸಾಳುವಿನಲ್ಲಿ ನಿಲುಗಡೆಗೆ ಒಪ್ಪಿಗೆ ಸಿಕ್ಕಿದೆ. ಕುಂಸಿ ನಿಲ್ದಾಣದಿಂದ ಹಾರನಹಳ್ಳಿ ನಿಲ್ದಾಣ ಐದಾರು ಕಿ.ಮೀ ಅಂತರದಲ್ಲಿದೆ. ಆದ್ದರಿಂದ ಹಾರನಹಳ್ಳಿಯಲ್ಲಿ ರೈಲು ನಿಲುಗಡೆಗೆ ತಾಂತ್ರಿಕವಾಗಿ ಕಷ್ಟ ಎಂದು ರೈಲ್ವೆ ಮ್ಯಾನೇಜರ್‌ ತಿಳಿಸಿದ್ದಾರೆ. ಆದರೂ ಮುಂದೆ ಹಾರನಹಳ್ಳಿಯಲ್ಲಿ ರೈಲು ನಿಲುಗಡೆಗೆ ಒತ್ತಾಯ ಮಾಡಲಾಗುತ್ತದೆ ಎಂದು ಸಂಸದ ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 22, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment