ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 AUGUST 2023
ಬೈಕ್ ಕೀಯಿಂದ ಮೂವರ ಮೇಲೆ ಹಲ್ಲೆ
SHIMOGA : ಅಡ್ಡ ನಿಲ್ಲಿಸಿದ್ದ ಬೈಕ್ (Bike) ತಗಿ ಎಂದಿದ್ದಕ್ಕೆ
ವ್ಯಕ್ತಿಯೊಬ್ಬ ಬೈಕ್ ಕೀಯಿಂದ (Bike Key) ಮೂವರ ಮೇಲೆ ಹಲ್ಲೆ ಮಾಡಿದ್ದಾನೆ. ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಘಟನೆ ಸಂಭವಿಸಿದೆ. ಮಂಜ ಎಂಬಾತ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಅಡ್ಡ ನಿಲ್ಲಿಸಿದ್ದ ಬೈಕ್ ತೆಗೆಯುವಂತೆ ಆಸ್ಪತ್ರೆ ಸಿಬ್ಬಂದಿ ಮತ್ತು ಮನೋಜ್ ಎಂಬುವವರು ಮಂಜ ಎಂಬಾತನಿಗೆ ತಿಳಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಮಂಜ ಮೂವರ ಮೇಲೆ ಬೈಕ್ ಕೀಯಿಂದ ಹೊಡೆದಿದ್ದಾನೆ. ಗಾಯಗೊಂಡಿದ್ದ ಮೂವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದ ವಾಹನ ಸವಾರರ ಎಚ್ಚರ, ಇನ್ಮುಂದೆ ಕಂಡಲ್ಲೆಲ್ಲ ಪಾರ್ಕಿಂಗ್ ಮಾಡುವಂತಿಲ್ಲ, ಕಾರಣವೇನು?

ಬೇಕರಿಯಿಂದ ಪಾರ್ಕಿಂಗ್ ಸ್ಥಳಕ್ಕೆ ಮರಳಿದ ವ್ಯಕ್ತಿಗೆ ಕಾದಿತ್ತು ಶಾಕ್
SHIMOGA : ಬೇಕರಿಗೆ ಹೋಗಿ ಮರಳಿ ಬರುವಷ್ಟರಲ್ಲಿ ಬೈಕ್
ಕಳ್ಳತನವಾಗಿದೆ. ಶಿವಮೊಗ್ಗದ ಎನ್.ಟಿ.ರಸ್ತೆಯ ಕೇಕ್ ಕೆಫೆ ಮುಂಭಾಗ ಘಟನೆ ಸಂಭವಿಸಿದೆ. ಹನುಮಂತಪ್ಪ ಎಂಬುವವರಿಗೆ ಸೇರಿದ ಸುಜೂಕಿ ಆಕ್ಸಿಸ್ 125 ಬೈಕ್ ಅನ್ನು ಕೇಕ್ ಕೆಫೆ ಮುಂದೆ ನಿಲ್ಲಸಿ, ಬೇಕರಿಗೆ ಹೋಗಿದ್ದರು. ಹತ್ತು ನಿಮಿಷದಲ್ಲಿ ಹೊರ ಬಂದು ನೋಡಿದಾಗ ಬೈಕ್ ಇರಲಿಲ್ಲ. ಎಲ್ಲೆಡೆ ಹುಡುಕಾಡಿದ ಬಳಿದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಬೈಕ್ ಕಳ್ಳತನವಾಗಿರುವ ಕುರಿತು ದೂರು ನೀಡಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಆಟೋಗಳ ದಿಢೀರ್ ತಪಾಸಣೆ, ಖುದ್ದು ಫೀಲ್ಡಿಗಿಳಿದ ರಕ್ಷಣಾಧಿಕಾರಿ

ಕಸದ ವಿಚಾರಕ್ಕೆ ನೆರೆಹೊರೆಯವರು
SHIMOGA : ಕಸದ ವಿಚಾರವಾಗಿ ನೆರೆಹೊರೆಯವರು ಗಲಾಟೆ
ಮಾಡಿಕೊಂಡಿದ್ದು ಕೈ ಕೈ ಮಿಲಾಯಿಸಿದ್ದಾರೆ. ಘಟನೆ ಸಂಬಂಧ ದೂರು ಪ್ರತಿದೂರು ದಾಖಲಾಗಿದೆ. ಅಶೋಕ ನಗರದಲ್ಲಿ ಘಟನೆ ಸಂಭವಿಸಿದೆ. ಮನೆಯೊಂದರ ಮುಂದಿದ್ದ ಕಸವನ್ನು ಪಕ್ಕಕ್ಕೆ ತಳ್ಳುತ್ತಿದ್ದಾಗ ನೆರೆ ಮನೆಯವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ಮನೆಗೆ ನೊಟೀಸ್, ಯೋಜನೆ ಜಾರಿಗೆ ದಿನಾಂಕ ಫಿಕ್ಸ್
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















