ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 26 AUGUST 2023
SORABA : ಚಂದ್ರಗುತ್ತಿಯಲ್ಲಿ (Chandragutti)ಶ್ರೀ ರೇಣುಕಾಂಬ ದೇವಸ್ಥಾನದ ದಿನಗೂಲಿ ನೌಕರನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ನಡೆದಿದೆ.
ಚಂದ್ರಗುತ್ತಿ ಗ್ರಾಮದ ಗಣಪತಿ ತಾವರೆಹಳ್ಳಿ (40) ಮೃತ ನೌಕರ. ಗ್ರಾಮದ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ (Renukamba Temple) ದಿನಗೂಲಿ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದ ಗಣಪತಿ ಅವರು ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ.
ಇದನ್ನೂ ಓದಿ – ಚಂದ್ರಗುತ್ತಿ ದೇವಸ್ಥಾನಕ್ಕೆ ಶಿವಮೊಗ್ಗ ಎಸ್ಪಿ ಭೇಟಿ, ಗ್ರಾಮಸ್ಥರೊಂದಿಗೆ ಸಭೆ, 6 ಪ್ರಮುಖ ಸಂಗತಿ ಪ್ರಸ್ತಾಪ
ಸೊರಬ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಈ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ದುರಸ್ತಿ ವೇಳೆ ಲೈನ್ ಮ್ಯಾನ್ಗೆ ಕರೆಂಟ್ ಶಾಕ್, ಸ್ಥಳದಲ್ಲೆ ಸಾವು

- ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

About The Editor
ನಿತಿನ್ ಆರ್.ಕೈದೊಟ್ಲು
















