ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 SEPTEMBER 2023
SHIMOGA : ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿಧ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು (Scholarship)ತಕ್ಷಣವೆ ಬಿಡುಗಡೆ ಮಾಡುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಿಂದ (ABVP) ಶುಕ್ರವಾರ ನಗರದ ಗೋಪಿ ಸರ್ಕಲ್‌ನಿಂದ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
2022-23ನೇ ಸಾಲಿನಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಸರಕಾರದ ವಿವಿಧ ಇಲಾಖೆಗಳ ಅಡಿ ಲಭ್ಯವಿರುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನಕ್ಕೂ ಅರ್ಜಿ ಸಲ್ಲಿಸಲಾಗಿದೆ. ಹಲವು ತಿಂಗಳು ಕಳೆದರೂ ಈವರೆಗೆ ವಿದ್ಯಾರ್ಥಿ ವೇತನ (Scholarship) ಬಿಡುಗಡೆಯಾಗಿಲ್ಲ ಎಂದು ಎಬಿವಿಪಿ (ABVP) ಕಾರ್ಯಕರ್ತರು ಆರೋಪಿಸಿದರು.
ಈ ಬಾರಿಯ ಪದವಿ ಪರೀಕ್ಷೆಗಳು ಈಗಾಗಲೆ ನಡೆಯುತ್ತಿವೆ. ಮುಂದಿನ ತರಗತಿಗಳಿಗೂ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಲಿದೆ. ಆದರೂ ರಾಜ್ಯ ಸರಕಾರ ವಿದ್ಯಾರ್ಥಿ ವೇತನ ಬಿಡುಗಡೆ ಮಾಡದೆ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ. ಹಲವು ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಈ ಕೂಡಲೆ ಗಮನ ಹರಿಸಿ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು ಎಂದು ಎಬಿವಿಪಿ ಕಾರ್ಯಕರ್ತರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪ್ರವೀಣ್, ಶರಣ್, ಅಭಿಷೇಕ್, ಯಶಸ್ವಿನಿ, ಸಿಂಚನಾ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿದ್ದರು.

LATEST NEWS
- ಕುಂಸಿ ಸುತ್ತಾಮುತ್ತಾ ಏ.8ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಊರು? ಇಲ್ಲಿದೆ ಲಿಸ್ಟ್

- ಸಕೆಂಡ್ ಹ್ಯಾಂಡ್ ಕಾರು ಖರೀದಿ ತಂದ ಫಜೀತಿ, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್? ಆಗಿದ್ದೇನು?

- ಶಿವಮೊಗ್ಗದ JNN ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೂಟ್ ಕ್ಯಾಂಪ್, ಏನಿದು?

- ಶಿವಮೊಗ್ಗ, ಶಿಕಾರಿಪುರ, ಸಾಗರದ ಐದು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ

- ಹೊಸನಗರ ಕ್ಷೇತ್ರ ಮರು ರಚನೆ, ಪಾದಯಾತ್ರೆ ಸಮಾರೋಪ, ಸಚಿವ, ಸಂಸದರು ಏನಂದ್ರು?

About The Editor
ನಿತಿನ್ ಆರ್.ಕೈದೊಟ್ಲು












