ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 SEPTEMBER 2023
RIPPONPETE : ವಿದ್ಯಾರ್ಥಿಯೊಬ್ಬನ ಬ್ಯಾಗಿನಲ್ಲಿ ನಾಗರಹಾವು (Snake) ಪತ್ತೆಯಾಗಿದೆ. ಸಹಪಾಠಿಯ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ.
ಹೊಸನಗರ ತಾಲೂಕು ರಿಪ್ಪನ್‌ಪೇಟೆ ಸಮೀಪದ ಬಾಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ಸಂಭವಿಸಿದೆ. ತರಗತಿಯಲ್ಲಿ ವಿದ್ಯಾರ್ಥಿ ಭುವನ್ ತನ್ನ ಬ್ಯಾಗಿನಿಂದ ಪುಸ್ತಕ ತೆಗೆಯಲು ಜಿಪ್ ತೆಗೆದಾಗ ನಾಗರ ಹಾವು ಇರುವುದು ಗೊತ್ತಾಗಿದೆ. ಪಕ್ಕದಲ್ಲಿ ಕುಳಿತಿದ್ದ ಸಹಪಾಠಿ ಮಣಿಕಂಠನಿಗೆ ವಿಚಾರ ತಿಳಿಸಿದ್ದ.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ ಕುರಿತು ಹಾಡು ರೆಡಿ | ಪಂಪ್ ಹೌಸ್‌ನಲ್ಲಿ ಮೋಟರ್ ನಾಪತ್ತೆ – 3 ಫಟಾಫಟ್ ನ್ಯೂಸ್
ಕೂಡಲೆ ಮಣಿಕಂಠ, ಭುವನ್ ಬ್ಯಾಗಿನ (Bag) ಜಿಪ್ ಹಾಕಿ ಹಾವು ಹೊರಗೆ ಬಾರದಂತೆ ಮುಂಜಾಗ್ರತೆ ವಹಿಸಿದ್ದಾನೆ. ಬಳಿಕ ಪಾಠ ಮಾಡುತ್ತಿದ್ದ ಶಿಕ್ಷಕರಿಗೆ ವಿಚಾರ ತಿಳಿಸಿದ್ದ. ಕೂಡಲೆ ಇತರೆ ಶಿಕ್ಷಕರು, ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದರು. ಶಾಲೆಯ ಸಮೀಪದಲ್ಲೇ ಇರುವ ಭುವನ್ ಮನೆಗೆ ಮಾಹಿತಿ ತಲುಪಿಸಿ, ಪೋಷಕರಿಗೆ ವಿಚಾರ ಮುಟ್ಟಿಸಲಾಯಿತು. ಬಳಿಕ ಶಿಕ್ಷಕರು, ಗ್ರಾಮಸ್ಥರು ಹಾವನ್ನು ಸಮೀಪದ ಕಾಡಿಗೆ ಕೊಂಡೊಯ್ದು ಸುರಕ್ಷಿತವಾಗಿ ಬಿಟ್ಟಿದ್ದಾರೆ. ಮಣಿಕಂಠನ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಇದನ್ನೂ ಓದಿ – ಭದ್ರಾವತಿಯ ಇಬ್ಬರು ಶಿಕ್ಷಕರು ಅಮಾನತು, ಕಾರಣವೇನು?
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















