ಭದ್ರಾ ನಾಲೆಗಳಿಗೆ ನೀರು‌, ಸಭೆಯಲ್ಲಿ ಏನೇನು ಚರ್ಚೆಯಾಯ್ತು? 4 ಪ್ರಮುಖಾಂಶ ತಿಳಿಸಿದ ಮಿನಿಸ್ಟರ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 SEPTEMBER 2023

SHIMOGA : ಭದ್ರಾ ಜಲಾಶಯದಿಂದ (Bhadra Dam) ನೀರು ಹರಿಸುವ ಕುರಿತು ಸೆ.11ರಂದು ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ. ಸದ್ಯ ಎಡದಂಡೆ ನಾಲೆಗೆ ನೀರು ಹರಿಸುವುದನ್ನು ನಿಲ್ಲಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು,.

ಮಲವಗೊಪ್ಪದ ಭದ್ರಾ ಕಾಡಾ (Bhadra Cada) ಕಚೇರಿಯಲ್ಲಿ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ನೀರು ನಿರ್ವಹಣಾ ಸಲಹಾ ಸಮಿತಿ ಸಭೆ ಬಳಿಕ ಸಚಿವ ಮತ್ತು ಸಮಿತಿ ಅಧ್ಯಕ್ಷ ಮಧು ಬಂಗಾರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ಸಭೆಯ ನಿರ್ಣಯ ತಿಳಿಸಿದರು.

060923-bhadra-kada-meeting-minister-madhu-bangarappa.webp

ಸಚಿವರು ಹೇಳಿದ 4 ಪ್ರಮುಖಾಂಶ

POINT-1-jpg.webpಸಭೆಯ ಚರ್ಚೆಗಳ ಕುರಿತು ಉಪ ಮುಖ್ಯಮಂತ್ರಿ, ಬೃಹತ್‌ ಮತ್ತು ಮಧ್ಯಮ ನೀರಾವರಿ ಸಚಿವ ಡಿ.ಕೆ.ಶಿವಕಮಾರ್‌ ಅವರ ಗಮನಕ್ಕೆ ತರಲಾಗುತ್ತದೆ. ಸೆ.11ರಂದು ಅಂತಿಮ ನಿರ್ಧಾರ ಪ್ರಕಟಿಸಲಾಗುತ್ತದೆ.

Bhadra cada meeting

POINT-2-jpg.webpಭದ್ರ ಎಡದಂಡೆ ನಾಲೆಯಿಂದ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ತೀರ್ಮಾನವಾಗಿದೆ. ತಕ್ಷಣದಿಂದಲೆ ನೀರು ನಿಲ್ಲಿಸಲಾಗುತ್ತದೆ. ಬಲದಂಡೆಯಲ್ಲಿ ನೀರಿನ ಪ್ರಮಾಣ ತಗ್ಗಿಸಲಾಗುತ್ತದೆ.

ಇದನ್ನೂ ಓದಿ – ಭದ್ರಾ ಡ್ಯಾಂನಿಂದ 100 ದಿನ ನೀರು, ಅಚ್ಚುಕಟ್ಟು ರೈತರಿಂದ ಅಹೋರಾತ್ರಿ ಧರಣಿ, ರೈತರ ಆಗ್ರಹವೇನು?

POINT-3-jpg.webpಹೆಚ್ಚು ಮಳೆಯಾಗುವ ನಿರೀಕ್ಷೆ ಇತ್ತು. ಆದರೆ ಮಳೆ ಪ್ರಮಾಣ ವಾಡಿಕೆಗಿಂತಲು ತುಂಬಾ ಕಡಿಮೆಯಾಗಿದೆ. ಜಲಾಯಶಯದ ಒಳ ಹರಿವು ಸಂಪೂರ್ಣ ಇಳಿಮುಖವಾಗಿದೆ. ಇಂತಹ ಸಂದರ್ಭ ನೀರು ನಿಲ್ಲಿಸಿದರೆ ಆ ಭಾಗದ ರೈತರಿಗೆ ಸಮಸ್ಯೆ, ಹರಿಸಿದರೆ ಈ ಭಾಗದ ರೈತರು ಮತ್ತು ಭವಿಷ್ಯದಲ್ಲಿ ತೊಂದರೆಯಾಗಲಿದೆ.

Bhadra cada meeting

POINT 4 jpgಭತ್ತ ಬೆಳೆಯಬಾರದು ಎಂದು ಈ ಮೊದಲೆ ಸೂಚನೆ ನೀಡಲಾಗಿತ್ತು. ಆದರೂ ರೈತರು ಭತ್ತ ಬೆಳೆದಿದ್ದಾರೆ. ಈ ಹಿನ್ನೆಲೆ ಎಲ್ಲವನ್ನು ಪರಿಶೀಲಿಸಲು ನಾಲ್ಕೈದು ದಿನ ಸಮಯ ಬೇಕಿದೆ. ರಾಜ್ಯಮಟ್ಟದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 6, 2023

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment