ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ‍ಶ್ರೀ ಕೃಷ್ಣ ಜಯಂತಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 SEPTEMBER 2023

Shivamogga-Live-Number-1-Website

SHIMOGA : ಶ್ರೀಕೃಷ್ಣ (Krishna) ನಮ್ಮೆಲ್ಲರ ಆರಾಧ್ಯ ದೈವ. ಇಡೀ ಜಗತ್ತಿಗೆ ಬೆಳಕನ್ನು ನೀಡಿ, ಧರ್ಮ ನಿಷ್ಠೆಯಿಂದ ಬದುಕಬೇಕೆಂದು ಹೇಳಿಕೊಟ್ಟವನು ಕೃಷ್ಣ ಎಂದು ಶಿವಮೊಗ್ಗ ನಗರ ಕ್ಷೇತ್ರ ಶಾಸಕರಾದ ಎಸ್.ಎನ್. ಚನ್ನಬಸಪ್ಪ ಹೇಳಿದರು.

ನಗರದ ಕುವೆಂಪು ರಂಗಮಂದಿರದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಗೊಲ್ಲರ(ಯಾದವ) ಸಂಘ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಶ್ರೀ ಕೃಷ್ಣ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗೋ ಸಂರಕ್ಷಣೆಗೆ ಸಂಪೂರ್ಣವಾಗಿ ಶಕ್ತಿ ಕೊಟ್ಟವನು ಶ್ರೀಕೃಷ್ಣ. ಈ ಸಮಾಜಕ್ಕೆ ಮಾತ್ರ ದೇವರಲ್ಲ, ಇಡೀ ಪ್ರಪಂಚಕ್ಕೆ ದೇವರು. ಒಳ್ಳೆ ಸಂಗತಿಗಳನ್ನು ಯೋಚನೆ ಮಾಡುತ್ತಾ ಮೈಗೂಡಿಸಿಕೊಳ್ಳಬೇಕು. ನಿಸ್ವಾರ್ಥತೆಯಿಂದ ಕೆಲಸವನ್ನು ಮಾಡು ಅದರ ಫಲ ನನಗೆ ಬಿಡು, ಅದಕ್ಕೆ ದಕ್ಕಬೇಕಾದ ಫಲ ದಕ್ಕುತ್ತದೆ ಎಂಬ ಕೃಷ್ಣನ ಮಾತಿನಂತೆ ಧರ್ಮ ನಿಷ್ಠೆಯಿಂದ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

ಇದನ್ನೂ ಓದಿ – ಶಿವಮೊಗ್ಗದಿಂದ ಕನೆಕ್ಟಿಂಗ್ ವಿಮಾನ ಹಾರಾಟಕ್ಕೆ ಗ್ರೀನ್‌ ಸಿಗ್ನಲ್‌, ಕೆಲವೆ ತಿಂಗಳಲ್ಲಿ ಬರಲಿದೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌

ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಡಾ.ಜಿ.ಕೆ ಪ್ರೇಮ ಮಾತನಾಡಿ, ಕೃಷ್ಣನಲ್ಲಿ ಅಪಾರ ಸಾಹಸ ಶಕ್ತಿ ಇದ್ದು ಕಾಳಿಂಗ ಸರ್ಪದ ಉಪಟಳದಿಂದ ಜನರನ್ನು ರಕ್ಷಿಸುತ್ತಾನೆ. ಮನಸ್ಸಿನಲ್ಲಿಯೇ ಲೋಕವನ್ನು ಅವಲೋಕನ ಮಾಡಿಕೊಳ್ಳುವ ಕೃಷ್ಣ, ಸುಧಾಮನ ಕಷ್ಟಗಳನ್ನು ನಿವಾರಿಸುತ್ತಾನೆ. ಸತ್ಯಭಾಮೆಯ ಅತ್ಯಂತ ಸರಳ ಭಕ್ತಿಯನ್ನು ಮೆಚ್ಚಿ ತುಳಸಿ ದಳಕ್ಕೆ ಶ್ರೀಕೃಷ್ಣ ಪರಮಾತ್ಮ ಒಲಿಯುತ್ತಾನೆ. ಅವನ ವಿಶೇಷ ವ್ಯಕ್ತಿತ್ವವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗೊಲ್ಲರ ಸಂಘದ ಅಧ್ಯಕ್ಷ ಕೆ.ಅಂಜನಪ್ಪ, ತಾಲ್ಲೂಕು ಗೊಲ್ಲರ ಸಂಘದ ಅಧ್ಯಕ್ಷ ಎಸ್.ಹೆಚ್.ಜಗದೀಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್.ಹೆಚ್, ಧರ್ಮ ಪ್ರಸಾದ್, ರಮೇಶ್ ಮತ್ತಿತ್ತರರು ಉಪಸ್ಥಿತರಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 6, 2023

ಶಿವಮೊಗ್ಗ KSRTC ನಿಲ್ದಾಣದಲ್ಲಿ ಭದ್ರಾವತಿ ಮಹಿಳೆಯ ಭಾರಿ ಮೊತ್ತದ ಚಿನ್ನಾಭರಣ ಕಳ್ಳತನ

ಶಿವಮೊಗ್ಗ KSRTC ನಿಲ್ದಾಣದಲ್ಲಿ ಭದ್ರಾವತಿ ಮಹಿಳೆಯ ಭಾರಿ ಮೊತ್ತದ ಚಿನ್ನಾಭರಣ ಕಳ್ಳತನ

ಶಿವಮೊಗ್ಗದಲ್ಲಿ ನೆತ್ತಿ ಸುಡುತ್ತಿದೆ ಬಿಸಿಲು, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ನೆತ್ತಿ ಸುಡುತ್ತಿದೆ ಬಿಸಿಲು, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಧಗಧಗ ಹೊತ್ತಿ ಉರಿದ ಡಸ್ಟರ್‌ ಕಾರು, ತಪ್ಪಿದ ಅನಾಹುತ, ಆಗಿದ್ದೇನು?

ಧಗಧಗ ಹೊತ್ತಿ ಉರಿದ ಡಸ್ಟರ್‌ ಕಾರು, ತಪ್ಪಿದ ಅನಾಹುತ, ಆಗಿದ್ದೇನು?

ಇಂದಿನ ಪಂಚಾಂಗ – ಇವತ್ತು ಪಂಚಮಿ, ಜ್ಯೇಷ್ಠ ನಕ್ಷತ್ರದ ದಿನ, ಶು ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಪಂಚಮಿ, ಜ್ಯೇಷ್ಠ ನಕ್ಷತ್ರದ ದಿನ, ಶು ಸಮಯ ಯಾವಾಗಿದೆ?

ಶಿವಮೊಗ್ಗದ ರೆಸಾರ್ಟ್‌ನಲ್ಲಿ ವಿದ್ಯುತ್‌ ಶಾಕ್‌ಗೆ ಮಹಿಳೆ ಬಲಿ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?

ಶಿವಮೊಗ್ಗದ ರೆಸಾರ್ಟ್‌ನಲ್ಲಿ ವಿದ್ಯುತ್‌ ಶಾಕ್‌ಗೆ ಮಹಿಳೆ ಬಲಿ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ ರೈಲಿಗೆ ಏಪ್ರಿಲ್‌ 8 ರಿಂದ ಅತ್ಯಾಧುನಿಕ LHB ಬೋಗಿಗಳು, ಏನಿದು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ ರೈಲಿಗೆ ಏಪ್ರಿಲ್‌ 8 ರಿಂದ ಅತ್ಯಾಧುನಿಕ LHB ಬೋಗಿಗಳು, ಏನಿದು?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – ಇಂದಿನ ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – ಇಂದಿನ ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್‌ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್‌ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

ಹೊಸನಗರ ಕ್ಷೇತ್ರಕ್ಕಾಗಿ ಪಾದಯಾತ್ರೆ? ಹೇಗಿತ್ತು ಮೊದಲ ದಿನ? ಯಾರೆಲ್ಲ ಇದ್ದರು?

ಹೊಸನಗರ ಕ್ಷೇತ್ರಕ್ಕಾಗಿ ಪಾದಯಾತ್ರೆ? ಹೇಗಿತ್ತು ಮೊದಲ ದಿನ? ಯಾರೆಲ್ಲ ಇದ್ದರು?

Leave a Comment