ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 SEPTEMBER 2023
SAGARA : ಅಪ್ರಾಪ್ತೆ ಮೇಲೆ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆ ಗ್ರಾಮವೊಂದರ 24 ವರ್ಷದ ಯುವಕನ (Youth) ವಿರುದ್ಧ ಪೋಕ್ಸೋ ಕಾಯ್ದೆ (Pocso Act) ಅಡಿ ಪ್ರಕರಣ ದಾಖಲಾಗಿದೆ. ಯುವಕ ಪರಾರಿಯಾಗಿದ್ದು ಆತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಈ ಮಧ್ಯೆ ಗ್ರಾಮಸ್ಥರು ಡಿವೈಎಸ್‌ಪಿ ಕಚೇರಿಗೆ ತೆರಳಿ ತಕ್ಷಣ ಆರೋಪಿಯನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ – ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್, ಯಾರು ಅರ್ಜಿ ಸಲ್ಲಿಸಬಹುದು?
ಕುಡಿಯಲು ನೀರು ಕೇಳಿ ದುಷ್ಕೃತ್ಯ
ಮಂಗಳವಾರ ಯಾರೂ ಇಲ್ಲದ ವೇಳೆ ಅಪ್ರಾಪ್ತೆ ಮನೆ ಬಳಿ ತೆರಳಿದ್ದ ಅದೇ ಗ್ರಾಮದ ಯುವಕ (Youth) ಕುಡಿಯಲು ನೀರು ಕೇಳಿದ್ದಾನೆ. ಬಾಲಕಿ ನೀರು ತರಲು ಒಳಗೆ ಹೋದಾಗ ಹಿಂದಿನಿಂದ ಹೋಗಿ ದೌರ್ಜನ್ಯ ಎಸಗಿದ್ದಾನೆ. ಬಾಲಕಿ ಕೂಗಿಕೊಂಡಾಗ ಆತ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಆಟೋಗಳ ದಿಢೀರ್ ತಪಾಸಣೆ, ಖುದ್ದು ಫೀಲ್ಡಿಗಿಳಿದ ರಕ್ಷಣಾಧಿಕಾರಿ
ತಕ್ಷಣ ಆರೋಪಿ ಬಂಧನಕ್ಕೆ ಆಗ್ರಹ
ಇನ್ನು, ಘಟನೆ ಖಂಡಿಸಿ ಗ್ರಾಮಸ್ಥರು ಸಾಗರ ಡಿವೈಎಸ್‌ಪಿ ಕಚೇರಿಗೆ ಭೇಟಿ ನೀಡಿದ್ದರು. ಡಿವೈಎಸ್‌ಪಿ ಗೋಪಾಲಕೃಷ್ಣ ನಾಯಕ್ ಅವರಿಗೆ ಮನವಿ ಸಲ್ಲಿಸಿದ್ದು, ಆರೋಪಿಯನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದರು.
LATEST NEWS
- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

About The Editor
ನಿತಿನ್ ಆರ್.ಕೈದೊಟ್ಲು






