ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 SEPTEMBER 2023
SHIMOGA : ನಾಟಿ ಕೋಳಿಗಳ ಮೇಲೆ ಬೀದಿ ನಾಯಿಗಳು (Stray Dogs) ದಾಳಿ ಮಾಡಿದ್ದು 12 ಕೋಳಿಗಳನ್ನು ಅರ್ಧಂಬರ್ಧ ತಿಂದು ಬಿಟ್ಟಿವೆ. ಈ ಸಂಬಂಧ ಅಬ್ಬಲಗೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗೆ ದೂರು ನೀಡಲಾಗಿದೆ.
ಶಿವಮೊಗ್ಗ ತಾಲೂಕು ಹುಣಸೋಡು ಗ್ರಾಮದ ನಿಂಗಮ್ಮ ಎಂಬುವವರು 30 ನಾಟಿ ಕೋಳಿಗಳನ್ನು ಸಾಕಿದ್ದರು. ಎಂದಿನಂತೆ ಮನೆ ಹಿತ್ತಲಿನಲ್ಲಿ ಮೇಯಲು ಬಿಟ್ಟಿದ್ದು ಶುಕ್ರವಾರ ಮಧ್ಯಾಹ್ನ ನಾಯಿಗಳ ದಾಳಿ ಮಾಡಿ ನಾಟಿ ಕೋಳಿಗಳನ್ನು ತಿಂದು ಹಾಕಿವೆ. ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಇಂದು ಕೋಳಿಗಳ ಮೇಲೆ ದಾಳಿ ಮಾಡಿರುವ ನಾಯಿಗಳು ಮುಂದೆ ಮಕ್ಕಳ ಮೇಲೆ ದಾಳಿ ಮಾಡುವ ಸಾಧ್ಯತೆಗಳಿವೆ.
ಇದನ್ನೂ ಓದಿ – ಬಾವಿ ತೆಗೆಯುವಾಗ ತಲೆ ಮೇಲೆ ಕಲ್ಲು ಬಿದ್ದು ಕಾರ್ಮಿಕ ಸ್ಥಳದಲ್ಲೇ ಸಾವು, ಹೇಗಾಯ್ತು ಘಟನೆ?
ಹಾಗಾಗಿ ಬೀದಿ ನಾಯಿಗಳನ್ನು ನಿಯಂತ್ರಿಸುವ ಕೆಲಸವನ್ನು ಮಾಡಬೇಕಿದೆ ಎಂದು ಪಿಡಿಒಗೆ ಗ್ರಾಮದ ನಿಂಗಮ್ಮ ಎಂಬುವವರು ಸಲ್ಲಿಸಿದ ದೂರಿನಲ್ಲಿ ತಿಳಿಸಿದ್ದಾರೆ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






