ಉಸ್ತುವಾರಿ ಸಚಿವ ಮಧು ಬಂಗಾರಪ್ಪ 2 ದಿನ ಜಿಲ್ಲಾ ಪ್ರವಾಸ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 SEPTEMBER 2023

SHIMOGA : ಜಿಲ್ಲಾ ಉಸ್ತುವಾರಿ ಸಚಿವ (Minister Tour) ಮಧು ಬಂಗಾರಪ್ಪ ಎರಡು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ವಿವಿಧ ಸಭೆ, ಸಮಾರಂಭಗಳಲ್ಲಿ ಭಾಗಿಯಾಗಲಿದ್ದಾರೆ.

ಸೆ.11ರಂದು ರಾತ್ರಿ 8 ಗಂಟೆಗೆ ಸೊರಬಕ್ಕೆ ಆಗಮಿಸಲಿದ್ದು, ವಾಸ್ತವ್ಯ ಮಾಡಲಿದ್ದಾರೆ. ಸೆ.12ರಂದು ಬೆಳಗ್ಗೆ 9 ಗಂಟೆಗೆ ಸೊರಬ ತಾಲೂಕಿನ ಜಡೆಯಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10ಕ್ಕೆ ಕುಬಟೂರು ಕೆರೆಗೆ ಬಾಗಿನ ಅರ್ಪಿಸಲಿದ್ದಾರೆ. ಸಂಜೆ 4 ಗಂಟೆಗೆ ಗಣೇಶ ಚತುರ್ಥಿ ಸಂಬಂಧ ಶಿವಮೊಗ್ಗದಲ್ಲಿ ಸೌಹಾರ್ದ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ರಾತ್ರಿ ಸೊರಬದಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ಇದನ್ನೂ ಓದಿ – ಕೆಲಸ ಹುಡುಕ್ತಿರೋರಿಗೆ ಗುಡ್ ನ್ಯೂಸ್, ಶಿವಮೊಗ್ಗ ಸೈನ್ಸ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ, 5 ಸಾವಿರ ಕೆಲಸ ಇದೆ

ಸೆ.13ರಂದು ಬೆಳಗ್ಗೆ 10 ಗಂಟೆಗೆ ಸೊರಬದಲ್ಲಿ ನಡೆಯಲಿರುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವ ಮಧು ಬಂಗಾರಪ್ಪ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಶಿಕಾರಿಪುರದಲ್ಲಿ ನಡೆಯಲಿರುವ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 7 ಗಂಟೆ ಶಿವಮೊಗ್ಗ ಮೂಲಕ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಂ.ಕಿಶೋರ್‌ ಕುಮಾರ್‌ ತಿಳಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ನ್ಯಾಯಾಲಯದ ಮೊದಲ ಮಹಿಳಾ ನ್ಯಾಯವಾದಿ ಇನ್ನಿಲ್ಲ, ಅವರ ಕುರಿತ ಮಾಹಿತಿ ಇಲ್ಲಿದೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment