ಪೊಲೀಸ್‌ ಕ್ವಾರ್ಟರ್ಸ್‌ನಲ್ಲಿಯೇ ಕಳ್ಳತನ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

SHIVAMOGGA LIVE NEWS | 11 SEPTEMBER 2023

SHIMOGA : ಪೊಲೀಸ್‌ ಕ್ವಾರ್ಟರ್ಸ್‌ನಲ್ಲಿ (Police Quarters) ಮನೆ ಮುಂದೆ ನಿಲ್ಲಿಸಿದ್ದ ಸೈಕಲ್‌ ಕಳ್ಳತನ ಮಾಡಲಾಗಿದೆ. ವ್ಯಕ್ತಿಯೊಬ್ಬ ಬೆಳಗಿನ ಜಾವ ಸೈಕಲ್‌ ಕದ್ದುಕೊಂಡ ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕೋಟೆ ರಸ್ತೆಯ ಪೊಲೀಸ್‌ ಕ್ವಾರ್ಟರ್ಸ್‌ನಲ್ಲಿ ಘಟನೆ ಸಂಭವಿಸಿದೆ. ಸೆ.5ರಂದು ಬೆಳಗಿನ ಜಾವ 4.30ರ ಹೊತ್ತಿಗೆ 25 ರಿಂದ 30 ವರ್ಷದ ಯುವಕನೊಬ್ಬ ಸೈಕಲ್‌ ಕಳ್ಳತನ ಮಾಡಿಕೊಂಡು ಹೋಗಿದ್ದಾನೆ. ಮನೆ ಎದುರು ಇರುವ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ ಎಂದು ಮಹಿಳೆ ದೂರು ನೀಡಿದ್ದಾರೆ. ಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಸ್ನೇಹಿತೆಗಾಗಿ ಬಸ್ಸಿನಿಂದ ಕೆಳಗಿಳಿದು ಪ್ಲಾಟ್‌ಫಾರಂನಲ್ಲಿ ಕುಳಿತಿದ್ದ ಮಹಿಳೆಗೆ ಕಾದಿತ್ತು ಶಾಕ್‌

Kalleshwara-Enterprises.webp
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment