ಶಿವಮೊಗ್ಗದ ಶ್ರೀಗಂಧ ಕೋಠಿಯಲ್ಲಿ ಹುತಾತ್ಮರಿಗೆ ನಮನ, ಹೇಗಿತ್ತು ದಿನಾಚರಣೆ? ಯಾರೆಲ್ಲ ಏನೇನು ಹೇಳಿದರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 SEPTEMBER 2023

SHIMOGA : ಅರಣ್ಯ ಇಲಾಖೆಯ ಶ್ರೀಗಂಧಕೋಠಿಯಲ್ಲಿ ಅರಣ್ಯ ಹುತಾತ್ಮರ ದಿನಾಚರಣೆ ನಡೆಯಿತು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ್‌ ನಾಯಕ್‌, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಸೇರಿದಂತೆ ಹಲವರು ಭಾಗಿಯಾಗಿ ಹುತಾತ್ಮರಿಗ ನಮನ (Homage) ಸಲ್ಲಿಸಿದರು.

ದೇಶ ರಕ್ಷಣೆಗಾಗಿ ಹೋರಾಡಿ ಪ್ರಾಣಾರ್ಪಣೆ ಮಾಡುವ ಸೈನಿಕನಿಗೆ ದೊರೆಯುವ ಗೌರವ, ದೇಶದ ಅಮೂಲ್ಯ ವನ್ಯ ಸಂಪತ್ತನ್ನು ರಕ್ಷಿಸುವ ಅರಣ್ಯ ಸಿಬ್ಬಂದಿ ಹಾಗೂ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಶ್ರಮಿಸುವ ಪೊಲೀಸ್ ಸಿಬ್ಬಂದಿ ಕರ್ತವ್ಯ ನಿರತರಾದಾಗ ಮೃತರಾದಾಗಲೂ ಅದೇ ರೀತಿಯ ಗೌರವ ಸೌಲಭ್ಯ ದೊರೆಯುವಂತಾಗಬೇಕು.ನ್ಯಾ. ಮಂಜುನಾಥ ನಾಯಕ್, ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ

Homage to forest officials

ಭಾರಿ ಪ್ರಮಾಣದಲ್ಲಿ ಕಾಡು ನಾಶಗೊಳಿಸಿ, ಕೃತಕವಾಗಿ ಮರಗಳನ್ನು ನೆಡುವುದರಿಂದ ಪರಿಸರ ಮತ್ತು ಅರಣ್ಯ ಸಂರಕ್ಷಿಸಿದಂತಾಗಲಿದೆ ಎಂದು ಅನೇಕರು ತಪ್ಪು ಅಭಿಪ್ರಾಯ ಹೊಂದಿದ್ದಾರೆ. ಇದು ಸಲ್ಲದು. ಇರುವ ಅರಣ್ಯವನ್ನು ಅದು ಇರುವಂತಹ ರೀತಿಯಲ್ಲಿಯೇ ಉಳಿಸಿ, ಬೆಳೆಸಿಕೊಂಡು ಹೋಗುವ ಅನಿವಾರ್ಯತೆ ಎದುರಾಗಿದೆ.ಡಾ. ಆರ್.ಸೆಲ್ವಮಣಿ, ಜಿಲ್ಲಾಧಿಕಾರಿ
ಮನುಷ್ಯನ ಅವ್ಯಾಹತ ದಾಳಿಯಿಂದಾಗಿ ಅರಣ್ಯಗಳು ದಿನೇ ದಿನೆ ನಾಶಗೊಳ್ಳುತ್ತಿವೆ. ಮನುಷ್ಯನ ಆಸೆಗೆ ಮಿತಿಯಿಲ್ಲದಂತಾಗಿದೆ. ಇದರಿಂದಾಗಿ ಅರಣ್ಯದಲ್ಲಿನ ಅಸಂಖ್ಯಾತ ಮರಗಳು, ಪ್ರಾಣಿ ಪಕ್ಷಿ ಸಂಕುಲದ ನಿರಂತರ ದಾಳಿಗೆ ತುತ್ತಾಗುತ್ತಿದೆ. ಇದರ ನಿಯಂತ್ರಣ ಅನಿವಾರ್ಯವಾಗಿದೆ. ಇಂತಹ ಸಂದಿಗ್ಧ ಸಂದರ್ಭ ಅರಣ್ಯ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಾಮಾಜಿಕ ಭದ್ರತೆ, ಶಾಂತಿಪಾಲನೆ, ಅರಣ್ಯ ಸಂರಕ್ಷಣೆ ಗಡಿರಕ್ಷಣೆಗೆ ಸಮನಾದ ಕಾರ್ಯವಾಗಿದೆ.ಮಿಥುನ್‌ ಕುಮಾರ್‌, ಜಿಲ್ಲಾ ರಕ್ಷಣಾಧಿಕಾರಿ

Homage to forest officials

ಹೆಚ್ಚುತ್ತಿರುವ ಜನಸಂಖ್ಯೆಯು ಭೂಮಿ, ಅರಣ್ಯ, ಸಸ್ಯ ಮತ್ತು ಪ್ರಾಣಿ ಸಂಕುಲದ ನಾಶಕ್ಕೆ ಕಾರಣವಾಗುತ್ತಿದೆ. ಎಲ್ಲರು ಅರಿತು ಅರಣ್ಯ ರಕ್ಷಣೆಗೆ ಮುಂದಾಗಬೇಕು. ಅರಣ್ಯ ರಕ್ಷಕರು ಕೂಡ ತಮ್ಮ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಬೇಕು.ಡಾ. ಕೆ.ಟಿ.ಹನುಮಂತಪ್ಪ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ

ಇದನ್ನೂ ಓದಿ – ಶಿವಮೊಗ್ಗದಲ್ಲಿ ಸ್ನೇಹಿತೆಗಾಗಿ ಬಸ್ಸಿನಿಂದ ಕೆಳಗಿಳಿದು ಪ್ಲಾಟ್‌ಫಾರಂನಲ್ಲಿ ಕುಳಿತಿದ್ದ ಮಹಿಳೆಗೆ ಕಾದಿತ್ತು ಶಾಕ್‌

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿ, ಸಿಬ್ಬಂದಿ,  ಹುತಾತ್ಮರಿಗೆ ಪುಷ್ಪ ಗುಚ್ಛವಿಟ್ಟು ಗೌರವ ಸಲ್ಲಿಸಿದರು.

ಇದನ್ನೂ ಓದಿ – ಕೆಲಸ ಹುಡುಕ್ತಿರೋರಿಗೆ ಗುಡ್ ನ್ಯೂಸ್, ಶಿವಮೊಗ್ಗ ಸೈನ್ಸ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ, 5 ಸಾವಿರ ಕೆಲಸ ಇದೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 12, 2023

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment