ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 SEPTEMBER 2023
SHIMOGA : ಚಾಲನಾ ಪರವಾನಗಿ (DRIVING LICENCE) ಇಲ್ಲದೇ ಓಮಿನಿ ಕಾರು ಚಲಾಯಿಸುತ್ತಿದ್ದ ಅಪ್ರಾಪ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಈ ಹಿನ್ನೆಲೆ ಆತನ ತಂದೆಗೆ ಇಲ್ಲಿನ ಮೂರನೇ ಎಸಿಜೆ ಹಾಗೂ ಜೆಎಂಎಫ್ ನ್ಯಾಯಾಲಯ 25 ಸಾವಿರ ರೂ. ದಂಡ ವಿಧಿಸಿದೆ.
ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರದ ನಿವಾಸಿ ಇಲಿಯಾಸ್ (41) ಎಂಬುವವರಿಗೆ ದಂಡ ವಿಧಿಸಲಾಗಿದೆ.
ಇಲಿಯಾಸ್ ಅವರ 17 ವರ್ಷದ ಮಗ ಸೆ.9ರಂದು ಶಿವಮೊಗ್ಗ ನಗರದಲ್ಲಿ ಓಮಿನಿ ಕಾರು ಚಲಾಯಿಸುತ್ತಿದ್ದ. ಕರ್ನಾಟಕ ಸಂಘದ ಬಳಿ ಬಿ.ಎಚ್.ರಸ್ತೆಯಲ್ಲಿ ಶಿವಮೊಗ್ಗ ಪೂರ್ವ ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ಎಚ್.ಎಸ್.ಶಿವಣ್ಣನವರ್ ವಾಹನ ತಪಾಸಣೆ ನಡೆಸಿದ್ದರು. ಈ ವೇಳೆ ಚಾಲಕನ ಬಳಿ ಡ್ರೈವಿಂಗ್ ಲೈಸೆನ್ಸ್ ಇಲ್ಲದಿರುವುದು ಮತ್ತು ಆತ ಅಪ್ರಾಪ್ತ ಎಂದು ಗೊತ್ತಾಗಿದೆ. ಈ ಹಿನ್ನೆಲೆ ಕಾರಿನ ಮಾಲೀನಾಗಿರುವ ಬಾಲಕನ ತಂದೆ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ – ಮುಖ್ಯ ರಸ್ತೆಯಲ್ಲಿ ಮಚ್ಚು ಹಿಡಿದು ಓಡಾಡಿ ಭಯ ಹುಟ್ಟಿಸಿದ ಯುವಕ, ಪೊಲೀಸ್ ದಾಳಿ
ಪೂರ್ವ ಸಂಚಾರ ಪೊಲೀಸರು ಲಘು ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ದಂಡ ವಿಧಿಸಿ ಆದೇಶಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕಾರಿನ ಚಕ್ರದ ಮೇಲೆ ಮೂತ್ರ ವಿಸರ್ಜಿಸಿದ ಬೀದಿ ನಾಯಿ, ಕೈ ಕೈ ಮಿಲಾಯಿಸಿದ ಎರಡು ಕುಟುಂಬ
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















