ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಅತಿ ಹೆಚ್ಚು ಗಣೇಶ ಮೂರ್ತಿಗಳ ವಿಸರ್ಜನೆ, ಎಲ್ಲೆಲ್ಲಿ ಹೇಗಿದೆ ಕಾರ್ಯಕ್ರಮ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 SEPTEMBER 2023

SHIMOGA : ಜಿಲ್ಲೆಯಾದ್ಯಂತ ಗಣೇಶೋತ್ಸವವನ್ನು (Ganesh Festival) ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಮೂರನೇ ದಿನವಾದ ಇವತ್ತು ಜಿಲ್ಲೆಯಲ್ಲಿ ಅತಿ ಹೆಚ್ಚು ಗಣಪತಿ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗುತ್ತಿದೆ. ಈ ಹಿನ್ನೆಲೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಮೂರೂವರೆ ಸಾವಿರ ಗಣಪತಿ

ಜಿಲ್ಲೆಯದ್ಯಂತ 3,511 ಸಾರ್ವಜನಿಕ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿತ್ತು. ಮೊದಲ ದಿನ (ಸೆ.18) ರಂದು 341 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ. ಸೆ.19ರಂದು 48 ವಿಸರ್ಜನೆ ಮಾಡಲಾಗಿದ್ದು, ಸೆ.20ರಂದು 989 ಗಣೇಶ ಮೂರ್ತಿಗಳನ್ನು ವಿಸರ್ಜಿಸಲಾಗುತ್ತಿದೆ. 4ನೇ ದಿನ 168 ಗಣೇಶ ಮೂರ್ತಿಗಳನ್ನು, 5ನೇ ದಿನ 711 ಗಣೇಶ ಮೂರ್ತಿಗಳನ್ನು ವಿಸರ್ಜಿಸಲಾಗುತ್ತಿದೆ.

ಧಾರ್ಮಿಕ ಕಾರ್ಯಕ್ರಮಗಳು

ಮೂರನೇ ದಿನ ಹೆಚ್ಚಿನ ಗಣಪತಿ ಮೂರ್ತಿಗಳ ವಿಸರ್ಜನೆ ಮಾಡಲಾಗುತ್ತಿದೆ. ಆದ್ದರಿಂದ ಇವತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಬಳಿಕ ಮೆರವಣಿಗೆ ನಡೆಸಿ ಮೂರ್ತಿಗಳ ವಿಸರ್ಜನೆ ಮಾಡಲಾಯಿತು. ಡೊಳ್ಳು ಸೇರಿದಂತೆ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು.

ವಿವಿಧೆಡೆ ಅನ್ನಸಂತರ್ಪಣೆ

ಗಣೇಶ ಹಬ್ಬದ (Ganesh Festival) ಹಿನ್ನೆಲೆ ವಿವಿಧೆಡೆ ಅನ್ನಸಂತರ್ಪಣೆ ಆಯೋಜಿಸಲಾಗಿದೆ. ಎಪಿಎಂಸಿ ತರಕಾರಿ ಮತ್ತು ಸೊಪ್ಪು ಸ್ನೇಹಿತರ ಗಣಪತಿ ಬಳಗ ವತಿಯಿಂದ 12ನೇ ವರ್ಷದ ಗಣಪತಿ ಮಹೋತ್ಸವ ಆಚರಣೆ ಮಾಡಲಾಗುತ್ತಿದೆ. ಪ್ರತಿದಿನ ಅನ್ನ ಸಂತರ್ಪಣೆ ಮಾಡಲಾಗುತ್ತಿದೆ. ಸಮಿತಿ ಅಧ್ಯಕ್ಷ ಸೊಪ್ಪು ಚಂದ್ರು, ಉಪಾಧ್ಯಕ್ಷ ಸಂದೀಪ್‌, ಕಾರ್ಯದರ್ಶಿ ಎಂ.ಎಸ್.ರಾಮು, ಖಜಾಂಚಿ ಅಣ್ಣಪ್ಪ, ರಾಜು.ಸಿ.ಕೆ ಸೇರಿದಂತೆ ಹಲವರು ಭಾಗಿಯಾಗಿದ್ದರು.

200923-Ganapathi-in-Shimoga-and-Shikaripura.webp

ಇದನ್ನೂ ಓದಿ – ಶಿವಮೊಗ್ಗದಲ್ಲಿ ವಿಜೃಂಭಣೆಯ ಗಣೇಶ ಚತುರ್ಥಿ, ಪ್ರತಿಷ್ಠಾಪನೆ ಆಯ್ತು ‘ಹಿಂದೂ ಮಹಾಸಭʼ ಗಣಪತಿ, ಎಲ್ಲೆಲ್ಲಿ ಹೇಗಿತ್ತು ವೈಭವ?

ಇತ್ತ ಶಿವಮೊಗ್ಗದ ಕಾಮಾಕ್ಷಿ ಬೀದಿಯಲ್ಲಿ ಶ್ರೀ ಚಿಕ್ಕೇರಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 84ನೇ ವರ್ಷದ ಗಣೇಶೋತ್ಸವದ ಅಂಗವಾಗಿ 1008 ಗಣಪತಿ ಯಾಗ ಆಯೋಜಿಸಲಾಗಿದೆ. ಸೆ.26ರಂದು ಯಾಗ ನಡೆಯಲಿದ್ದು, ಅನ್ನಸಂತರ್ಪಣೆ ಮಾಡಲಾಗುತ್ತಿದೆ. ಸೆ.27ರಂದು ರಾಜಬೀದಿ ಉತ್ಸವವನ್ನು ಆಯೋಜಿಸಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 20, 2023

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment