‘ರೈತರ ಇಳುವರಿ ಹೆಚ್ಚಿಸಲು ಪಂಚಾಯಿತಿವಾರು ಕಾರ್ಯಾಗಾರ ನಡೆಸಿ’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 SEPTEMBER 2023

SAGARA : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ (Horticulture) ವಿಜ್ಞಾನಗಳ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳಿಗೆ ಮಾತ್ರವಲ್ಲ, ಕೃಷಿಕರ ವಿಶ್ವವಿದ್ಯಾಲಯವಾಗಿಯು ಬೆಳೆಯಬೇಕು ಎಂದು ಮಾಜಿ ವಿಧಾನ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದರು.

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ (Horticulture)  ವಿಜ್ಞಾನಗಳ ವಿಶ್ವವಿದ್ಯಾಲಯದ ಇರುವಕ್ಕಿ ಆವರಣದಲ್ಲಿ ಆಯೋಜಿಸಲಾಗಿದ್ದ ವಿಶ್ವವಿದ್ಯಾಲಯದ 11ನೇ ಸಂಸ್ಥಾಪನಾ ದಿನಾಚರಣೆ ಉದ್ಘಾಟಿಸಿ ಅವರು ಮಾತಾಡಿದರು.

ರೈತರ ಇಳುವರಿ ಹೆಚ್ಚಿಸಬೇಕು

ರೈತರು ಯಾವ ಭೂಮಿಯಲ್ಲಿ ಎಂತಹ ಬೆಳೆಯನ್ನು ಬೆಳೆಯಬೇಕೆಂಬ ಪರಿಜ್ಞಾನ, ಮಾಹಿತಿ ನೀಡಲು ಪಂಚಾಯಿತಿವಾರು ಕನಿಷ್ಟ 50 ಜನರಿಗೆ ಕಾರ್ಯಾಗಾರ ಹಮ್ಮಿಕೊಳ್ಳಬೇಕು. ರೈತರ ಇಳುವರಿ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಸಂಶೋಧನೆ, ಪ್ರಯೋಗಗಳನ್ನು ಕೈಗೊಂಡಲ್ಲಿ ರೈತರು ಸಹ ವಿಶ್ವವಿದ್ಯಾಲಯದ ಜೊತೆಗೆ ಕೈ ಜೋಡಿಸುತ್ತಾರೆ ಎಂದರು.

ರೈತರ ಮಕ್ಕಳಿಗೆ ಶೇ.50ರಷ್ಟು ಮೀಸಲು

ಪ್ರಗತಿಪರ ರೈತ ದೊಡ್ಡಗೌಡ ಸಿ.ಪಾಟೀಲ್ ಮಾತಾಡಿ, ಬರಗಾಲದಿಂದ ರೈತರು ತತ್ತರಿಸುತ್ತಿರುವ ಈ ಸಂದರ್ಭದಲ್ಲಿ ರೈತರಿಗೆ ಮಾರ್ಗದರ್ಶನ ಮಾಡುವ ಜವಾಬ್ದಾರಿ ವಿವಿ ಮೇಲಿದೆ. ಬೆಳೆ, ರೋಗ ನಿರ್ವಹಣೆ ಕುರಿತು ತಿಳಿಸಬೇಕು. ರೈತರ ಜೀವನ ಹಸನು ಮಾಡಲು ಪ್ರಯತ್ನಿಸಬೇಕು. ವಿವಿ ಯಲ್ಲಿ ರೈತರ ಮಕ್ಕಳಿಗೆ ಶೇ.50 ಮೀಸಲಾತಿ ಇದೆ. ಇಂಜಿನಿಯರಿಂಗ್‌ಗಿಂತ ಕೃಷಿ ವಿಜ್ಞಾನಕ್ಕೆ ಹೆಚ್ಚಿನ ಬೇಡಿಕೆ ಇದೆ. ಈ ನಿಟ್ಟಿನಲ್ಲಿ ವಿಶ್ವವಿದ್ಯಾನಿಲಯ ಬೆಳೆಯಬೇಕು ಎಂದರು.

ಆರು ಹೊಸ ಸ್ನಾತಕೋತ್ತರ ಕೇಂದ್ರ

ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ ಜಗದೀಶ್‌ ಮಾತನಾಡಿ, ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಹೊಸದಾಗಿ 6 ಸ್ನಾತಕೋತ್ತರ ಅಧ್ಯಯನ ಕೇಂದ್ರಗಳನ್ನು ಆರಂಭಿಸಲಾಗುವುದು. ಭವಿಷ್ಯದಲ್ಲಿ ವಿಶ್ವವಿದ್ಯಾಲಯವು ಮತ್ತಷ್ಟು ಅಭಿವೃದ್ಧಿ ಆಗಲಿದೆ ಎಂದು ತಿಳಿಸಿದರು.

ಅತ್ಯುತ್ತಮ ಶಿಕ್ಷಕರು, ವಿಜ್ಞಾನಿಗಳು, ಸಿಬ್ಬಂದಿಗೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಣೆ ಮಾಡಲಾಯಿತು. ನಿವೃತ್ತರಾದ ಶಿಕ್ಷಕ, ಸಿಬ್ಬಂದಿಯನ್ನು ಗೌರವಿಸಲಾಯಿತು.

ಇದನ್ನೂ ಓದಿ – ಪ್ರಗತಿಪರ ರೈತ, ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ?

ವಿವಿ ಕುಲಸಚಿವ ಡಾ. ಕೆ.ಸಿ.ಶಶಿಧರ್ ಸ್ವಾಗತಿಸಿದರು. ವ್ಯವಸ್ಥಾಪನಾ ಮಂಡಳಿ ಸದಸ್ಯ ಹಾಗೂ ಪ್ರಗತಿಪರ ರೈತ ವೀರಭದ್ರಪ್ಪ ಪೂಜಾರಿ, ಶಿಕ್ಷಣ ತಜ್ಞ ಪಿ.ಕೆ.ಬಸವರಾಜ ಮಾತನಾಡಿದರು. ಪ್ರಗತಿಪರ ರೈತ ನಾಗರಾಜ್, ಕೃಷಿ ಉದ್ದಿಮೆದಾರ ಬಿ.ಕೆ.ಕುಮಾರಸ್ವಾಮಿ, ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 22, 2023

ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

Leave a Comment