ಶಿವಮೊಗ್ಗದ ಜೈಲ್‌ ಸರ್ಕಲ್‌ನಲ್ಲಿ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 24 SEPTEMBER 2023

SHIMOGA : ತಮಿಳುನಾಡಿಗೆ ಕಾವೇರಿ ನೀರು (Cauvery Water) ಹರಿಸದಿರುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜೈಲ್‌ ಸರ್ಕಲ್‌ನಲ್ಲಿ ಕಾವೇರಿ ನಿರ್ವಹಣಾ ಪ್ರಾಧಿಕಾರದ ಭೂತ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬೆಂಗಳೂರಿಗೆ ಕುಡಿಯುವ ನೀರು, ಕಾವೇರಿ (Cauvery Water) ಕಣಿವೆ ರೈತರ ಹೊಲ, ಗದ್ದೆಗೆ ನೀರು ಅಗತ್ಯವಿದೆ. ಇಂತಹ ಸಂದರ್ಭ 7 ಟಿಎಂಸಿ ನೀರು ಹರಿಸುವಂತೆ ಆದೇಶಿಸಲಾಗಿದೆ. ಇಷ್ಟು ಪ್ರಮಾಣದ ನೀರನ್ನು ಎಲ್ಲಿಂದ ತರುವುದು. ಆದ್ದರಿಂದ, ಯಾವುದೆ ಕಾರಣಕ್ಕೂ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸಬಾರದು. ಒಂದು ವೇಳೆ ನೀರು ಹರಿಸಿದರೆ ಕರವೇ ವತಿಯಿಂದ ಹೋರಾಟ ತೀವ್ರಗೊಳಿಸಲಾಗುತ್ತದೆ ಎಂದು ಎಚ್ಚರಿಸಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಕಪ್ಪು ಬಾವುಟ ಪ್ರದರ್ಶನ, ತಕ್ಷಣ ತಜ್ಞರ ಸಮಿತಿ ಕಳುಹಿಸುವಂತೆ ಪ್ರಧಾನಿ ಮೋದಿಗೆ ಒತ್ತಾಯ

ಕರವೇ ರಾಜ್ಯ ಕಾರ್ಯದರ್ಶಿ ಮಂಜುನಾಥ್‌ ಕೋಟ್ಯಾನ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಗೌರವಾಧ್ಯಕ್ಷ ಮಂಜುನಾಥ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಂಗನಾಥ್‌, ಜಿಲ್ಲಾ ಉಪಾಧ್ಯಕ್ಷ ಎಸ್‌.ಗಂಗಾಧರ್‌ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment