ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 25 SEPTEMBER 2023
THIRTHAHALLI : ರಾಜ್ಯ ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ, ವಿಧಾನ ಪರಿಷತ್ ಮಾಜಿ ಸದಸ್ಯ ಡಾ. ಬಿ.ಎಸ್.ವಿಶ್ವನಾಥ (90) ಅನಾರೋಗ್ಯದಿಂದ (Ill Health) ಬೆಂಗಳೂರಿನಲ್ಲಿ ಭಾನುವಾರ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಬೆಂಗಳೂರಿನ ಸುಬ್ರಹ್ಮಣ್ಯಪುರದ ಅವರ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿದು ಬಂದಿದೆ.
ವಿಶ್ವನಾಥ್ ಅವರು ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರದಿಂದ ಶಾಂತವೇರಿ ಗೋಪಾಲಗೌಡ ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದರು. ಬಳಿಕ ಎರಡು ಬಾರಿ ಶಿವಮೊಗ್ಗ – ಚಿಕ್ಕಮಗಳೂರು ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಇದನ್ನೂ ಓದಿ – ಜೋಗ ಸಮೀಪ ನೀರಿನಲ್ಲಿ ಮುಳುಗಿ ಕೃಷಿ ಅಧಿಕಾರಿ, ಬ್ಯಾಂಕ್ ಉದ್ಯೋಗಿ ಸಾವು
ಸಹಕಾರ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ವಿಶ್ವನಾಥ ಅವರು ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದರು. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿದ್ದರು. ಇಫ್ಕೊ ಸಂಸ್ಥೆ ನಿರ್ದೇಶಕರಾಗಿದ್ದರು. ಕಲೆ, ಸಾಂಸ್ಕೃತಿಕ ಕ್ಷೇತ್ರದಲ್ಲಿಯು ತೊಡಗಿಸಿಕೊಂಡು ವಿವಿಧ ಸಂಸ್ಥೆಗಳಲ್ಲಿ ಸಕ್ರಿಯವಾಗಿದ್ದರು. ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು, ವೇದಿಕೆಗಳ ಸ್ಥಾಪನೆಯಲ್ಲ ಪ್ರಮುಖ ಪಾತ್ರ ವಹಿಸಿದ್ದರು. ವಿಶ್ವನಾಥ ಅವರು ತೀರ್ಥಹಳ್ಳಿ ತಾಲೂಕು ಬಸರವಳ್ಳಿಯ ದಿವಂಗತ ಸುಬ್ಬಯ್ಯಗೌಡ ಅವರ ಪುತ್ರ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422