ಸಕ್ರೆಬೈಲು ಆನೆ ಬಿಡಾರದಲ್ಲಿ ಸ್ವಚ್ಚತಾ ಹಿ ಸೇವಾ ಅಭಿಯಾನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 SEPTEMBER 2023

SHIMOGA : ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆಯನ್ನು (Cleanliness) ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ. ಪ್ಲಾಸ್ಟಿಕ್ ಬಳಕೆ ನಿಲ್ಲಿಸುವ ಕುರಿತು ಜನಾಂದೋಲನ ಆಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ಹೇಳಿದರು

ಸ್ವಚ್ಚತಾ ಹಿ ಸೇವಾ ಅಭಿಯಾನದ ಅಡಿ ಸಕ್ರೈಬೈಲು ಆನೆ ಬಿಡಾರದಲ್ಲಿ ಆಯೋಜಿಸಿದ್ದ ಸ್ವಚ್ಛತಾ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು. ಪ್ಲಾಸ್ಟಿಕ್‍ನಿಂದ ಆರೋಗ್ಯದ ಮೇಲೆ, ಪರಿಸರ, ವನ್ಯಜೀವಿಗಳ ಮೇಲೆ ಆಗುತ್ತಿರುವ ದುಷ್ಪರಿಣಾಮ ಕುರಿತು ಜಾಗೃತಿ ಮೂಡಿಸಬೇಕಾಗಿದೆ ಎಂದರು.

ಇದನ್ನೂ ಓದಿ – ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಕೊನೆಯ ದಿನಾಂಕ ಯಾವಾಗ?

ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ನಾಗರಾಜ ಪರಿಸರ, ಗ್ರಾಮ ಪಂಚಾಯತ್ ಅಧ್ಯಕ್ಷ ವಿ.ಎಸ್.ನಾಗರಾಜ್, ಕಾರ್ಯಕ್ರಮದಲ್ಲಿ ಆರ್.ಎಫ್.ಓ ವಿನಯ್ ಕುಮಾರ್, ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕರಾದ ಲೋಹಿತ್.ಎಸ್, ರವಿ, ರಾಮಚಂದ್ರ, ಮೊರಾರ್ಜಿ ಶಾಲೆಯ ಪ್ರಾಂಶುಪಾಲರು ಮತ್ತು ಪಿ ಡಿ ಓ ಕೃಷ್ಣ ಮೂರ್ತಿ, ಸಿಬ್ಬಂದಿ ಕುಮಾರ್, ಗೌರಿಶಂಕರ್, ಗಣೇಶ್, ಜಯಂತ್ ಬಾಬು, ಅರುಣ್ ಇನ್ನಿತರ ಸಾರ್ವಜನಿಕರು ಉಪಸ್ಥಿತರಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment