ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 2 OCTOBER 2023
SHIMOGA : ಜಿಂಕೆ, ಬರ್ಕ ಮತ್ತು ಕಾಡು ಮೊಲ ಶಿಕಾರಿ (Hunting) ಮಾಡಿದ್ದ ಆರು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಎರಡು ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.
ಶಿವಮೊಗ್ಗ ತಾಲೂಕು ಉಂಬ್ಳೆಬೈಲು ವಲಯ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಶಿಕಾರಿ ಮಾಡಲಾಗಿತ್ತು. ಈ ಸಂಬಂಧ ಈಶ್ವರ್, ನವೀನ್, ಸುಜಿತ್, ಸುನಿಲ್, ಭರತ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಒಂದು ಓಮ್ನಿ ಮತ್ತು ಮಾರುತಿ 800 ಕಾರು ವಶಕ್ಕೆ ಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಗಾಂಧಿ ಬಜಾರ್ ವ್ಯಾಪಾರಿಗಳದ್ದು ‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು’ ಸ್ಥಿತಿ
ಆರೋಪಿಗಳ ವಿರುದ್ಧ ವನ್ಯಜೀವಿ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಭದ್ರಾವತಿ ಡಿಸಿಎಫ್ ಆಶಿಶ್ ರೆಡ್ಡಿ, ಎಸಿಎಫ್ ರತ್ನಪ್ರಭ ಮಾರ್ಗದರ್ಶನದಲ್ಲಿ ಉಂಬ್ಳೆಬೈಲು ಆರ್‌ಎಫ್‌ಒ ತೇಜ್ ವೈ.ಪಿ, ಡಿವೈಆರ್‌ಎಫ್‌ಓ ಗಿಡ್ಡಸ್ವಾಮಿ, ಡಿವೈಆರ್‌ಎಫ್‌ಓ ಅಬ್ದುಲ್ ಮಜೀದ್, ಗಸ್ತು ವನಪಾಲಕ ಶ್ರೀಕಾಂತ್, ರಂಗೇಗೌಡ, ದಿನೇಶ್ ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422