ಮುಲಾಜಿಲ್ಲದೆ ಕಠಿಣ ಕ್ರಮ, ಉಸ್ತುವಾರಿ ಸಚಿವರ ಖಡಕ್ ವಾರ್ನಿಂಗ್‌

SHIVAMOGGA LIVE NEWS | 2 OCTOBER 2023 (ಈ ಸುದ್ದಿಯನ್ನು ಇನ್ನು 54 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

SHIMOGA : ಶಾಂತಿ ಭಂಗಮಾಡುವ, ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವ, ಕಾನೂನು ಮುರಿಯುವ ವ್ಯಕ್ತಿಗಳ ವಿರುದ್ಧ ಮುಲಾಜಿಲ್ಲದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಎಚ್ಚರಿಸಿದ್ದಾರೆ.

ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಘಟನೆ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಚಿವ ಮಧು ಬಂಗಾರಪ್ಪ, ಶಿವಮೊಗ್ಗ ಜಿಲ್ಲೆಯು ಸಾಹಿತ್ಯ, ಸಂಸ್ಕೃತಿ, ಕಲೆ, ಪ್ರಕೃತಿ ಸೌಂದರ್ಯ ಮತ್ತು ಸಾಮರಸ್ಯಕ್ಕೆ ಹೆಸರಾಗಿದೆ. ಜಿಲ್ಲೆಯಲ್ಲಿ ಎಲ್ಲ ವರ್ಗದವರು ಶಾಂತಿ, ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದಾರೆ. ಅದರಂತೆ ಹಿಂದೂ ಮಹಾಸಭಾದ ಗಣಪತಿ ವಿಸರ್ಜನಾ ಕಾರ್ಯಕ್ರಮ ಶಾಂತಿಯುತವಾಗಿ ನೆರವೇರಿದೆ. ಆದರೆ ಈದ್ ಮಿಲಾದ್ ಹಬ್ಬದಂದು ಅಹಿತಕರ ಘಟನೆ ನಡೆದಿರುವುದು ವಿಷಾದನೀಯ ಎಂದು ತಿಳಿಸಿದರು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ – ‘ಶಿವಮೊಗ್ಗದಲ್ಲಿ ಧಗ ಧಗ, ಕೊತ ಕೊತ ಇಲ್ಲ’, ಕಲ್ಲು ತೂರಾಟ ಕೇಸ್‌ನಲ್ಲಿ ಈತನಕ ಅರೆಸ್ಟ್‌ ಆದವರೆಷ್ಟು?

ಯಾರೇ ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟು ಮಾಡುವುದು, ಕಾನೂನು ಕೈಗೆತ್ತಿಕೊಳ್ಳುವುದು ಖಂಡನೀಯ. ಕಿಡಿಗೇಡಿಗಳನ್ನು ಹಿಡಿದು ಕಾನೂನಿನ ಸುಪರ್ದಿಗೆ ಒಪ್ಪಿಸಬೇಕು. ಶಾಂತಿ ಭಂಗ ಮಾಡುವ, ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವ, ಕಾನೂನನ್ನು ಮುರಿಯುವವರ ವಿರುದ್ಧ ಮುಲಾಜಿಲ್ಲದ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಮ್ಮ ಜಿಲ್ಲೆಯಲ್ಲಿ ಇಂತಹ ಯಾವುದೇ ಕೃತಕ್ಕೆ ಅವಕಾಶವಿಲ್ಲ. ಜನರು ಶಾಂತಿ ಕಾಪಾಡಬೇಕು ಎಂದು ಮಧು ಬಂಗಾರಪ್ಪ ಮನವಿ ಮಾಡಿದ್ದಾರೆ.

JOB NEWS

Jnanasudha Institutions Jobs
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Minister-Madhu-Bangarappa-warns-miscreants

Leave a Comment