ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 4 OCTOBER 2023
SHIMOGA : ರಾಗಿಗುಡ್ಡದಲ್ಲಿನ ಕಲ್ಲು ತೂರಾಟ ಘಟನೆ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ (Whatsapp) ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಎನ್‌ಕೌಂಟರ್ ಕುರಿತು ಸುಳ್ಳು ಮೆಸೇಜ್ ಕಳುಹಿಸಿದ ಒಬ್ಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.
ಎನ್‌ಕೌಂಟರ್ ಅಂತಾ ಸುಳ್ಳು ಸುದ್ದಿ
ರಾಗಿಗುಡ್ಡದಲ್ಲಿ ಪೊಲೀಸ್ ಎನ್‌ಕೌಂಟರ್‌ಗೆ ಯುವಕ ಬಲಿ ಎಂದು ವಾಟ್ಸಪ್ ಗ್ರೂಪ್ ಒಂದರಲ್ಲಿ ವ್ಯಕ್ತಿಯೊಬ್ಬ ಮೆಸೇಜ್ ಕಳುಹಿಸಿದ್ದ. ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ. ಮೆಸೇಜ್ ರವಾನಿಸಿದವನ ವಿರುದ್ಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲು ಮಾಡಲಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಎನ್‌ಕೌಂಟರ್ ಎಂದು ಸುಳ್ಳು ಸುದ್ದಿ ಹಬ್ಬಿಸಿದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದೆ. ಯಾರ ಎನ್‌ಕೌಂಟರ್ ಆಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿತ್ತೋ ಆ ವ್ಯಕ್ತಿ ಕಲ್ಲು ತೂರಾಟ ವೇಳೆ ಗಾಯಗೊಂಡಿದ್ದರು. ಸದ್ಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ಮಾತನಾಡಿಸಲಾಗಿದೆ ಎಂದು ತಿಳಿಸಿದರು.
ಹೊರ ರಾಜ್ಯದ ವಿಡಿಯೋಗಳು
ರಾಗಿಗುಡ್ಡದ ಘಟನೆ ಸಂಬಂಧ ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಪೈಕಿ ಹಲವು ವಿಡಿಯೋಗಳು ಹೊರ ರಾಜ್ಯದ ಹಳೆಯ ವಿಡಿಯೋ ತುಣುಕು ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ಇಂತಹ ವಿಡಿಯೋಗಳನ್ನು ವೈರಲ್ ಮಾಡಿ ಸಾಮಾಜಿಕ ಸ್ವಸ್ಥ್ಯ ಕೆಡಿಸುವ ಪ್ರಯತ್ನವಾಗುತ್ತಿದೆ. ಅಂತಹವರ ವಿರುದ್ಧವು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.
LATEST NEWS
- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

About The Editor
ನಿತಿನ್ ಆರ್.ಕೈದೊಟ್ಲು
















