ರಾತ್ರಿ ಕುಡಿದ ಮತ್ತಿನಲ್ಲಿ ಟ್ಯಾಂಕ್‌ ಏರಿದ ಭೂಪ, ಕೆಳಗಿಳಿಯಲಾಗದೆ ಪರದಾಟ, ಮುಂದೇನಾಯ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 OCTOBER 2023

SHIMOGA : ಮದ್ಯದ ನಶೆಯಲ್ಲಿ ವ್ಯಕ್ತಿಯೊಬ್ಬ ಕುಡಿಯುವ ನೀರಿನ ಟ್ಯಾಂಕ್‌ (Water tank) ಹತ್ತಿ ಆತಂಕ ಸೃಷ್ಟಿಸಿದ್ದ. ಕೆಳಗಿಳಿಯಲು ಸಾಧ್ಯವಾಗದೆ ಪರದಾಡುತ್ತಿದ್ದವನನ್ನು ಅಗ್ನಿಶಾಮಕ ಸಿಬ್ಬಂದಿ ಪೊಲೀಸರ ನೆರವಿನೊಂದಿಗೆ ರಕ್ಷಣೆ ಮಾಡಿದ್ದಾರೆ.

ಶಿವಮೊಗ್ಗದ ಕಾಶಿಪುರ ಬಡಾವಣೆಯ ಶಿವಪ್ಪನಾಯಕ ಲೇಔಟ್‌ನ 2ನೇ ಅಡ್ಡರಸ್ತೆಯಲ್ಲಿ ಗುರುವಾರ ರಾತ್ರಿ ಘಟನೆ ಸಂಭವಿಸಿದೆ. ಸ್ನೇಹಿತರೊಂದಿಗೆ ಬಂದಿದ್ದ ನಟರಾಜ ಎಂಬಾತ ಮದ್ಯ ಸೇವಿಸಿದ್ದಾನೆ. ಕುಡಿಯುವ ನೀರಿನ ಟ್ಯಾಂಕ್‌ ಏರಿದ್ದು ಕೆಳಗಿಳಿಯಲಾಗದೆ ಪರಿದಾಡಿದ್ದಾನೆ ಎಂದು ಹೇಳಲಾಗುತ್ತಿದೆ. ವಿಷಯ ತಿಳಿದ ಸ್ಥಳೀಯರು ಘಟನೆ ಕುರಿತು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಸ್ಥಳಕ್ಕಾಗಮಿಸಿದ ಪೊಲೀಸರು ಅಗ್ನಿಶಾಮಕ ಸಿಬ್ಬಂದಿಯನ್ನು ಕರೆಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಟ್ಯಾಂಕ್‌ ಮೇಲೆ ಹತ್ತಿದ ಅಗ್ನಿಶಾಮಕ ಸಿಬ್ಬಂದಿ ಹಗ್ಗ ಕಟ್ಟಿ ಆತನನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಟ್ಯಾಂಕ್‌ಗೆ ಮೆಟ್ಟಿಲುಗಳಿವೆ. ಆದರೆ ಅವು ಸರಿ ಇಲ್ಲದಿದ್ದರಿಂದ ನಟರಾಜನಿಗೆ ಕೆಳಗಿಳಿಯಲು ಭೀತಿ ಉಂಟಾಗಿತ್ತು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ – ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥಗೌಡ ಶಿವಮೊಗ್ಗ, ತೀರ್ಥಹಳ್ಳಿ ಮನೆಗಳ ಮೇಲೆ ED ದಾಳಿ

ರಕ್ಷಣಾ ಕಾರ್ಯಾಚರಣೆ ವೀಕ್ಷಿಸಲು ನೆರೆಹೊರೆಯ ರಸ್ತೆಯ ನಿವಾಸಿಗಳು ಜಮಾಯಿಸಿದ್ದರು. ಟ್ಯಾಂಕ್‌ನಿಂದ ಕೆಳಗಿಳಿಸಿದ ಬಳಿಕ ಪೊಲೀಸರು ಆತನನ್ನು ವಶಕ್ಕೆ ಪಡೆದರು. ವಿನೋಬನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 6, 2023

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

Leave a Comment