ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 OCTOBER 2023
SHIMOGA : ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರ ಮನೆಗಳಲ್ಲಿ ಜಾರಿ ನಿರ್ದೇಶನಲಾಯದ (ED raid) ಅಧಿಕಾರಿಗಳು ಸುಮಾರು 11 ಗಂಟೆ ಪರಿಶೀಲನೆ ನಡೆಸಿದರು. ಗುರುವಾರ ಬೆಳಗ್ಗೆ 6.30ರಿಂದ ಸಂಜೆ 5 ಗಂಟೆವರೆಗೆ ಪರಿಶೀಲನೆ ನಡೆಸಿದ್ದಾರೆ.
ತೀರ್ಥಹಳ್ಳಿಯ ಬೆಟ್ಟಮಕ್ಕಿ, ಕರಕುಚ್ಚಿ ಮತ್ತು ಶಿವಮೊಗ್ಗದ ಶರಾವತಿ ನಗರದಲ್ಲಿರುವ ಮನೆಗಳಲ್ಲಿ ಇಡಿ ಅಧಿಕಾರಿಗಳು (ED raid) ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಯಾವುದೆ ಅಕ್ರಮ ಆಸ್ತಿ, ಹಣ ಪತ್ತೆಯಾಗಿಲ್ಲ ಎಂದು ಪ್ರಮಾಣ ಪತ್ರ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಇಡಿ ಅಧಿಕಾರಿಗಳ ದಾಳಿ ವೇಳೆ ಮಂಜುನಾಥಗೌಡ ಮತ್ತು ಅವರ ಕುಟುಂಬದವರು ಮನೆಗಳಲ್ಲಿ ಇರಲಿಲ್ಲ. ಆದ್ದರಿಂದ ಮನೆಯಲ್ಲಿದ್ದ ಸಹಾಯಕರ ನೆರವಿನಿಂದ ಪರಿಶೀಲನೆ ನಡೆಸಲಾಯಿತು ಎಂದು ತಿಳಿದು ಬಂದಿದೆ.
ಇದನ್ನೂ ಓದಿ – ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಮನೆಗಳ ಮೇಲೆ ಇಡಿ ದಾಳಿ, ಶಿವಮೊಗ್ಗದಲ್ಲಿ ಆಕ್ರೋಶ, ಪ್ರತಿಭಟನಾಕರರು ಹೇಳಿದ್ದೇನು?
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

About The Editor
ನಿತಿನ್ ಆರ್.ಕೈದೊಟ್ಲು
















