144 ಸೆಕ್ಷನ್‌, ಶಿವಮೊಗ್ಗ ಜಿಲ್ಲಾಧಿಕಾರಿಯಿಂದ ಪರಿಷ್ಕೃತ ಆದೇಶ, ಏನಿದೆ ಆದೇಶದಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 OCTOBER 2023

SHIMOGA : ರಾಗಿಗುಡ್ಡದಲ್ಲಿ ಈದ್‌ ಮಿಲಾದ್‌ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ಸಂಭವಿಸಿತ್ತು. ಮುಂಜಾಗ್ರತ ಕ್ರಮವಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶಿಸಿದ್ದರು. ಈಗ ನಿಷೇಧಾಜ್ಞೆ ಕುರಿತು ಪರಿಷ್ಕೃತ ಆದೇಶ ಹೊರಡಿಸಲಾಗಿದ್ದು, ಶಾಂತಿನಗರ – ರಾಗಿಗುಡ್ಡ ಬಡಾವಣೆಗೆ ಮಾತ್ರ ನಿಷೇಧಾಜ್ಞೆ ಮುಂದುವರೆಸಲಾಗಿದೆ.

ಅ.1ರಿಂದ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಪರಿಷ್ಕೃತ ಆದೇಶದಲ್ಲಿ ನಗರದಾದ್ಯಂತ ನಿಷೇಧಾಜ್ಞೆ ತೆರವು ಮಾಡಲಾಗಿದೆ. ಆದರೆ ಮುಂದಿನ ಆದೇಶದವರೆಗೆ ರಾಗಿಗುಡ್ಡ – ಶಾಂತಿನಗರದಲ್ಲಿ ಮಾತ್ರ ನಿಷೇಧಾಜ್ಞೆ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

ರಾಗಿಗುಡ್ಡದಲ್ಲಿ ಏನಿರುತ್ತೆ? ಏನಿರಲ್ಲ?

ನಿಷೇಧಾಜ್ಞೆ ಸಂದರ್ಭ ಐದು ಜನರಿಗಿಂತಲು ಹೆಚ್ಚು ಜನರು ಗುಂಪುಗೂಡುವುದು ಮತ್ತು ಓಡಾಡುವುದನ್ನು ನಿಷೇಧಿಸಲಾಗಿದೆ. ಈ ಅವಧಿಯಲ್ಲಿ ಯಾವುದೆ ಮೆರವಣಿಗೆ, ಪ್ರತಿಭಟನೆ, ಸಭೆ, ಸಮಾರಂಭಗಳನ್ನು ನಡೆಸುವಂತಿಲ್ಲ.

ಇದನ್ನೂ ಓದಿ – ಗೋಪಿ ಸರ್ಕಲ್‌ನಲ್ಲಿದ್ದ ಸ್ಮಾರ್ಟ್‌ ಸಿಟಿ ಕಲ್ಲಿನ ರೇಲಿಂಗ್‌ ನಾಪತ್ತೆ

ಘೋಷಣೆಗಳನ್ನು ಕೂಗುವುದು, ಪ್ರಚೋದನಕಾರಿ ಹೇಳಿಕೆ ನೀಡುವುದು, ಪ್ರಚೋದನಕಾರಿ ಫ್ಲೆಕ್ಸ್‌, ಬಂಟಿಂಗ್ಸ್‌, ಬ್ಯಾನರ್‌ ಕಟ್ಟುವುದನ್ನು ನಿಷೇಧಿಸಲಾಗಿದೆ. ಮಾರಕಾಸ್ತ್ರ, ಸ್ಪೋಟಕ ಹೊಂದುವುದು, ಅವುಗಳನ್ನು ಹಿಡಿದು ಓಡಾಡುವುದನ್ನು ಕೂಡ ನಿಷೇಧಿಸಲಾಗಿದೆ.

ಈ ಹಿಂದೆ ಅನುಮತಿ ಪಡೆದಿರುವ ಕಾರ್ಯಕ್ರಮಗಳನ್ನು ಮಾತ್ರ ನಡೆಸಲು ಅನುಮತಿ ಇದೆ ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment