ರಾಗಿಗುಡ್ಡ ಘಟನೆ, ಶಿವಮೊಗ್ಗದಲ್ಲಿ ಬಿಜಿಪಿಯಿಂದ ಪ್ರತಿಭಟನೆಗೆ ದಿನಾಂಕ ಪ್ರಕಟ

SHIVAMOGGA LIVE NEWS | 10 OCTOBER 2023 (ಈ ಸುದ್ದಿಯನ್ನು ಇನ್ನು 40 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

SHIMOGA : ರಾಗಿಗುಡ್ಡದಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂದೂಗಳ ಮನೆಗಳ ಮೇಲೆ ಕಲ್ಲು ತೂರಾಟ (Stone Pelting) ನಡೆಸಿದ ಘಟನೆ ಖಂಡಿಸಿ ಅ.12ರಂದು ಬೆಳಿಗ್ಗೆ 11ಕ್ಕೆ ಬಾಲರಾಜ್ ಅರಸ್ ರಸ್ತೆಯ ಮಥುರಾ ಪ್ಯಾರಡೈಸ್ ಬಳಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ತಿಳಿದರು.

TD-Megharaj-BJP-Shimoga-District-President.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟಿ.ಡಿ.ಮೇಘರಾಜ್‌, ಪ್ರತಿಭಟನೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕರಾದ ಆರಗ ಜ್ಞಾನೇಂದ್ರ, ಬಿ.ವೈ.ವಿಜಯೇಂದ್ರ, ಎಸ್.ಎನ್.ಚನ್ನಬಸ್ಪ ಪಾಲ್ಗೊಳ್ಳುವರು ಎಂದರು.

ಇದನ್ನೂ ಓದಿ – ವೀರಶೈವ ಲಿಂಗಾಯತ ಸಮುದಾಯ ಶಾಮನೂರು ಹೇಳಿಕೆಗೆ ಧ್ವನಿಗೂಡಿಸಬೇಕು

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂಗಳ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದೆ. ರಾಗಿಗುಡ್ಡದಲ್ಲಿ ನಡೆದದ್ದೂ ಇದೇ. ಕಾಂಗ್ರೆಸ್ ಸರ್ಕಾರ ಮುಸ್ಲಿಮರನ್ನು ಓಲೈಸುತ್ತಿದೆ ಎಂದು ಆರೋಪಿಸಿದರು.

ಪ್ರಮುಖರಾದ ಎಸ್.ದತ್ತಾತ್ರಿ, ಶಿವರಾಜ್, ಬಿ.ಕೆ.ಶ್ರೀನಾಥ್, ಹೃಷಿಕೇಶ್ ಪೈ, ಜಗದೀಶ್, ವಿಶ್ವಾಸ್, ಶಶಿಧರ್, ಕೆ.ವಿ. ಅಣ್ಣಪ್ಪ ಸುದ್ದಿಗೋಷ್ಠಿಯಲ್ಲಿ ಇದ್ದರು. 

JOB NEWS

Jnanasudha Institutions Jobs
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment