‘ಲಂಚಕ್ಕೆ ಬೇಡಿಕೆ’, ‘ಕೆಲಸ ವಿಳಂಬ’, ದೂರು ಸ್ವೀಕರಿಸಲು ಸಭೆ ಆಯೋಜಿಸಿದ ಲೋಕಾಯುಕ್ತ, ಎಲ್ಲೆಲ್ಲಿ ಯಾವಾಗ ಸಭೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 OCTOBER 2023

SHIMOGA : ಲೋಕಾಯುಕ್ತ ಪೊಲೀಸ್‌ (Lokayukta) ವಿಭಾಗದ ವತಿಯಿಂದ ಜಿಲ್ಲೆಯಾದ್ಯಂತ ಕುಂದು ಕೊರತೆ ಅರ್ಜಿ ಸ್ವೀಕಾರ ನಿಗದಿಪಡಿಸಲಾಗಿದೆ. ಫಲಾನುಭವಿಗಳಿಗೆ ಸರ್ಕಾರಿ ಯೋಜನೆ ದೊರಕಿಸಿಕೊಡುವಲ್ಲಿ ಬೇಜವಾಬ್ದಾರಿ, ಕರ್ತವ್ಯ ನಿರ್ವಹಿಸಲು ಅಧಿಕಾರಿಗಳ ನಿರ್ಲಕ್ಷ್ಯ, ವಿಳಂಬ, ಲಂಚಕ್ಕೆ ಬೇಡಿಕೆ ಇಟ್ಟ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಅಹವಾಲು ಸಲ್ಲಿಸಬಹುದಾಗಿದೆ.

ಎಲ್ಲೆಲ್ಲಿ ನಡೆಯುತ್ತೆ ಸಭೆ?

ಅ.19ರಂದು ಭದ್ರಾವತಿ ತಾಲೂಕು ಕಚೇರಿ ಸಭಾಂಗಣ ಮತ್ತು ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವೆರೆಗೆ. ಅ.20ರಂದು ಸೊರಬ ತಾಲೂಕು ಕಚೇರಿ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ, ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣದಲ್ಲಿ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30ರ ವರೆಗೆ. ಅ.21ರಂದು ಸಾಗರ ತಾಲೂಕು ಕಚೇರಿ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಅಹವಾಲು ಸ್ವೀಕರಿಸಲಾಗುತ್ತದೆ ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗದ ಕೆಲಸ ಶುರು, ಇಲ್ಲಿದೆ ಕಾಮಗಾರಿ ಕುರಿತ 4 ಪ್ರಮುಖಾಂಶ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 17, 2023

Leave a Comment