ಸಕ್ರೆಬೈಲು ಬಿಡಾರದ ಆನೆ ಬಾಲ ಕಟ್‌, ಹರಿತ ಆಯುಧದಿಂದ ದಾಳಿ ಶಂಕೆ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 OCTOBER 2023

SHIMOGA : ಕಳೆದ ವರ್ಷ ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಸಕ್ರೆಬೈಲಿನ ಭಾನುಮತಿ ಆನೆಯ (Elephant) ಬಾಲಕ್ಕೆ ಹರಿತವಾದ ಆಯುಧದಿಂದ ಹೊಡೆದು ಗಾಯಗೊಳಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ವೈದ್ಯರು ಭೇಟಿ ನೀಡಿ ಚಿಕಿತ್ಸೆ ನೀಡಿದ್ದಾರೆ.

ಭಾನುಮತಿ ಆನೆ (Elephant) ತುಂಬು ಗರ್ಭಿಣಿಯಾಗಿದ್ದು ಪ್ರಸವಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಭಾನುಮತಿ ಆನೆಯ ಬಾಲಕ್ಕೆ ಚೂಪಾದ ಆಯುಧದಿಂದ ಹೊಡೆಯಲಾಗಿದೆ. ಬಾಲಕ್ಕೆ ಗಂಭೀರ ಗಾಯವಾಗಿದೆ. ಸಕ್ರೆಬೈಲು ಬಿಡಾರದ ವೈದ್ಯರು ಭಾನುಮತಿಗೆ ಚಿಕಿತ್ಸೆ ನೀಡಿದ್ದಾರೆ.

ಇದನ್ನೂ ಓದಿ- ಶಿವಮೊಗ್ಗದ ಕಾಚಿನಕಟ್ಟೆಯಲ್ಲಿ 8 ಅಡಿ ಉದ್ದದ ಹೆಬ್ಬಾವು ಸೆರೆ

ಘಟನೆಗೆ ಕಾರಣವೇನು?

ಭಾನುಮತಿ ಆನೆಯ ಮಾವುತ ಮತ್ತು ಕಾವಾಡಿ ಮೇಲಿನ ದ್ವೇಷಕ್ಕೆ ಬಿಡಾರದ ಒಳಗಿರುವವರಿಂದಲೇ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಡಿಸಿಎಫ್‌ ಪ್ರಸನ್ನ ಪಟಗಾರ್‌, ಭಾನುಮತಿ ಆನೆಯನ್ನು ಎಂದಿನಂತೆ ಕಾಡಿಗೆ ಬಿಡಲಾಗಿತ್ತು. ಕರೆತರಲು ಮಾವುತರು ಹೋದಾಗ ರಕ್ತದ ಕಲೆ ಕಾಣಿಸಿತ್ತು. ಪರಿಶೀಲಿಸಿದಾಗ ಬಾಲಕ್ಕೆ ಗಾಯವಾಗಿತ್ತು. ಹರಿತವಾದ ವಸ್ತುವಿನಿಂದ ಗಾಯಗೊಳಿಸಿದಂತೆ ಕಂಡು ಬರುತ್ತಿದೆ. ಆನೆ ಆರೋಗ್ಯವಾಗಿದೆ. ಬಾಲ ಅಲ್ಲಾಡಿಸುತ್ತಿದೆ. ಘಟನೆ ಸಂಬಂಧ ತನಿಖೆಗೆ ನಡೆಸುವಂತೆ ಆರ್‌.ಎಫ್‌.ಓ ಅವರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಭಾನುಮತಿ ಆನೆ ಪಾಲ್ಗೊಂಡಿತ್ತು. ಕಳೆದ ವರ್ಷವು ಭಾನುಮತಿ ಆನೆ ಮೆರವಣಿಗೆಯಲ್ಲಿತ್ತು. ಈ ಬಾರಿ ಗರ್ಭಿಣಿ ಆಗಿರುವುದರಿಂದ ಭಾನುಮತಿ ಆನೆ ದಸರಾದಲ್ಲಿ ಭಾಗವಹಿಸುತ್ತಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 18, 2023

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment