ತಾಲೂಕು ಕಚೇರಿಗೆ MLA ದಿಢೀರ್‌ ಭೇಟಿ, ಹಾಜರಾತಿ ಪುಸ್ತಕ ತೆಗೆದು ನೋಡಿ ಅಧಿಕಾರಿಗಳ ವಿರುದ್ಧ ಸಿಡಿಮಿಡಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 OCTOBER 2023

THIRTHAHALLI : ಸಾರ್ವಜನಿಕರ ದೂರಿನ ಹಿನ್ನೆಲೆ ಶಾಸಕ ಆರಗ ಜ್ಞಾನೇಂದ್ರ (Araga Jnanendra) ಅವರು ತೀರ್ಥಹಳ್ಳಿ ತಾಲೂಕು ಕಚೇರಿ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಕಚೇರಿ ಅವ್ಯವಸ್ಥೆ ಕಂಡು ಗರಂ ಆದರು.

ಬುಧವಾರ ಮಧ್ಯಾಹ್ನ ಶಾಸಕ ಆರಗ ಜ್ಞಾನೇಂದ್ರ ಅವರು ತಾಲೂಕು ಕಚೇರಿಗೆ ದಿಢೀರ್‌ ಭೇಟಿ ನೀಡಿದರು. ಈ ಸಂದರ್ಭ ಕಚೇರಿಯ ವಿವಿಧೆಡೆ ಸಿಬ್ಬಂದಿ ಇಲ್ಲದಿರುವುದನ್ನು ಗಮನಿಸಿ ಸಿಡಿಮಿಡಿಗೊಂಡರು. ಹಾಜರಾತಿ ಪುಸ್ತಕ ತರಿಸಿಕೊಂಡು ಪರಿಶೀಲಿಸಿದರು.

ಇದನ್ನೂ ಓದಿ- ರಾಗಿಗುಡ್ಡಕ್ಕೆ ತೆರಳಬೇಕಿದ್ದ ಪ್ರಮೋದ್‌ ಮುತಾಲಿಕ್‌ಗೆ ಮಾಸ್ತಿಕಟೆಯಲ್ಲಿ ತಡೆ, ನೊಟೀಸ್‌ ಜಾರಿ

ರಜೆ ಚೀಟಿ ಇದ್ದರೂ ನಮೂದಾಗಿಲ್ಲ

ಸರ್ವೆ ಇಲಾಖೆಗೆ ಭೇಟಿ ನೀಡಿದ್ದ ವೇಳೆ ಕಚೇರಿಯಲ್ಲಿ ಸಿಬ್ಬಂದಿ ಇರಲಿಲ್ಲ. ಹಾಗಾಗಿ ಹಾಜರಾತಿ ಪುಸ್ತಕ ತರಿಸಿಕೊಂಡು ಪರಿಶೀಲಿಸಿದರು. ಸಿಬ್ಬಂದಿಯೊಬ್ಬರು ಕೊಟ್ಟಿದ್ದ ರಜೆ ಚೀಟಿ ಪುಸ್ತಕದಲ್ಲಿತ್ತು. ಆದರೆ ಅದನ್ನು ಹಾಜರಾತಿ ಪುಸ್ತಕದಲ್ಲಿ ನಮೂದು ಮಾಡಿರಲಿಲ್ಲ. ಇನ್ನು ಸಮರ್ಪಕವಾಗಿ ಸಹಿ ಮಾಡಿರಲಿಲ್ಲ. ಇದರಿಂದ ಸಿಟ್ಟಾದ ಶಾಸಕರು, ಇಂತಹ ತಪ್ಪುಗಳನ್ನು ಮಾಡದಂತೆ ತರಾಟೆಗೆ ತೆಗೆದುಕೊಂಡರು.

ತಾಲೂಕು ಕಚೇರಿಯಲ್ಲಿ ಅಧಿಕಾರಿಗಳು ನಿಯಮಿತವಾಗಿ ಕಡತ ವಿಲೇವಾರಿ ಮಾಡದಿರುವ ಕುರಿತು ಸಾರ್ವಜನಿಕರಿಂದ ದೂರು ಕೇಳಿ ಬರುತ್ತಿದೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕು ಕಚೇರಿಯಲ್ಲಿನ ಅವ್ಯವಸ್ಥೆಯನ್ನು ತಕ್ಷಣ ಪರಿಹರಿಸಬೇಕು ಎಂದು ತಾಕೀತು ಮಾಡಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 19, 2023

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment