ದಸರಾ ರಜೆ, ಪ್ರಯಾಣಿಕರ ಅನುಕೂಲಕ್ಕಾಗಿ KSRTCಯಿಂದ ವಿಶೇಷ ವ್ಯವಸ್ಥೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 OCTOBER 2023

KSRTC : ದಸರಾ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ 2 ಸಾವಿರ ವಿಶೇಷ ಬಸ್‌ (SPECIAL BUSES) ವ್ಯವಸ್ಥೆ ಮಾಡಿದೆ. ಬೆಂಗಳೂರಿನಿಂದ ರಾಜ್ಯದ ವಿವಿಧೆಡೆಗೆ ಪ್ರಯಾಣಿಕರ ದಟ್ಟಣೆ ಹೆಚ್ಚಿರುವ ಕಡೆಗೆ ಈ ಬಸ್ಸುಗಳು ತೆರಳಲಿವೆ. ಅಕ್ಟೋಬರ್‌ 20 ರಿಂದ 26ರವರೆಗೆ ವಿಶೇಷ ಬಸ್ಸುಗಳು ಸಂಚರಿಸಲಿವೆ.

ದಸರಾ ಹಬ್ಬದ ಹಿನ್ನೆಲೆ ಸಾಲು ಸಾಲು ರಜೆ ಇದೆ. ಆದ್ದರಿಂದ ಜನರು ತಮ್ಮೂರಿನತ್ತ ಮುಖ ಮಾಡಿದ್ದಾರೆ. ಖಾಸಗಿ ಬಸ್ಸುಗಳಲ್ಲಿ ಟಿಕೆಟ್‌ ದರ ದುಬಾರಿಯಾಗುವ ಸಾಧ್ಯತೆ ಇದೆ. ಆದ್ದರಿಂದ ಜನರು ಕೆಎಸ್‌ಆರ್‌ಟಿಸಿ ಬಸ್ಸುಗಳತ್ತ ಮುಖ ಮಾಡಿದ್ದಾರೆ. ಶಕ್ತಿ ಯೋಜನೆ ಅನ್ವಯ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿದೆ. ಅದ್ದರಿಂದ ಪ್ರಯಾಣಿಕರ ದಟ್ಟಣೆ ಹೆಚ್ಚುವ ಸಂಭವಿಸಿದೆ. ಇದೆ ಕಾರಣಕ್ಕೆ ಸಾರಿಗೆ ನಿಗಮವು ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಿದೆ.

ಇದನ್ನೂ ಓದಿ – ಹೆಂಡತಿ, ಮಕ್ಕಳನ್ನು ಬಸ್‌ ಹತ್ತಿಸಿ ಕಳುಹಿಸಿದ ಕೆಲವೇ ನಿಮಿಷಕ್ಕೆ ಬಂತು ಫೋನ್‌, ಪತಿಗೆ ಶಾಕ್‌, ಆಗಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment