ಸಾಲ ಬಾಧೆ, ವಿಷ ಸೇವಿಸಿದ್ದ ರೈತ ಚಿಕಿತ್ಸೆ ಫಲಿಸದೆ ಕೊನೆಯುಸಿರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 OCTOBER 2023

THIRTHAHALLI : ಸಾಲ ಬಾಧೆಗೆ ರೈತರೊಬ್ಬರು (Farmer) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕು ಹೊಸಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಂಟೂರುಕಟ್ಟೆ ಸಮೀಪದ ದಂಡಿನಕೊಡಿಗೆ ಗ್ರಾಮದ ನಾರಾಯಣ ಪೂಜಾರಿ (67) ಆತ್ಮಹತ್ಯೆ ಮಾಡಿಕೊಂಡವರು.

ಬುಧವಾರ ಬೆಳಗ್ಗೆ ಮನೆಯಲ್ಲಿ ವಿಷ ಸೇವಿಸಿ ನಾರಾಯಣ ಪೂಜಾರಿ ಅಸ್ವಸ್ಥರಾಗಿದ್ದರು. ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ- ಅಡಿಕೆ ಧಾರಣೆ | 19 ಅಕ್ಟೋಬರ್‌ 2023 | ಎಲ್ಲೆಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment