ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 OCTOBER 2023
SHIMOGA : 2022ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಕೌನ್ಸಲಿಂಗ್‌ಗೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅ.21ರಂದು ಶಿವಮೊಗ್ಗದಲ್ಲಿ ಕೌನ್ಸಲಿಂಗ್ (Counselling) ನಡೆಯಲಿದೆ ಎಂದು ಡಿಡಿಪಿಐ ಸಿ.ಆರ್ ಪರಮೇಶ್ವರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅ.19ರಂದು ಶಾಲಾ ಶಿಕ್ಷಣ ಇಲಾಖೆಯ ವೆಬ್‍ಸೈಟ್ https://schooleducation.karnataka.gov.in ನಲ್ಲಿ ಕೌನ್ಸಲಿಂಗ್‌ಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಗಣಿತ ಮತ್ತು ವಿಜ್ಞಾನ, ಸಮಾಜ ವಿಜ್ಞಾನ, ಜೀವ ವಿಜ್ಞಾನ ಮತ್ತು ಆಂಗ್ಲಭಾಷಾ ಹುದ್ದೆಗಳಿಗೆ ಸ್ಥಳ ನಿಯುಕ್ತಿ ಕೌನ್ಸಲಿಂಗ್ (Counselling) ನಡೆಯಲಿದೆ. ಅ.21ರಂದು ಬೆಳಿಗ್ಗೆ 10 ರಿಂದ ಶಿವಮೊಗ್ಗದ ಬಿ.ಹೆಚ್.ರಸ್ತೆಯ ಮೀನಾಕ್ಷಿ ಭವನ ಹೊಟೇಲ್ ಸಮೀಪ ಇರುವ ಕರ್ನಾಟಕ ಪಬ್ಲಿಕ್ ಶಾಲೆ (ಕೆಇಎಸ್ ಶಾಲೆ) ಕೌನ್ಸಲಿಂಗ್ ನಡೆಯಲಿದೆ. ಇಲಾಖಾ ವೆಬ್‍ಸೈಟಿನಲ್ಲಿರುವಂತೆ ಭಾವಚಿತ್ರವಿರುವ ಗುರುತಿನ ಚೀಟಿ & ನೇಮಕಾತಿಗೆ ಸಂಬಂಧಪಟ್ಟಂತೆ ಅಗತ್ಯ ದಾಖಲೆಯೊಂದಿಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ತಿಳಿಸಲಾಗಿದೆ.
ಇದನ್ನೂ ಓದಿ- ಸಕ್ರೆಬೈಲು ಬಿಡಾರದ ಆನೆ ಬಾಲ ಕಟ್, ಹರಿತ ಆಯುಧದಿಂದ ದಾಳಿ ಶಂಕೆ, ಕಾರಣವೇನು?
ಹೆಚ್ಚಿನ ಮಾಹಿತಿಗೆ ಡಿಡಿಪಿಐ ಸಿ.ಆರ್ ಪರಮೇಶ್ವರಪ್ಪ ಮೊ.ಸಂ: 9448999351, ಶಿಕ್ಷಣಾಧಿಕಾರಿ ಲೋಕೇಶಪ್ಪ ಕೆ.ಬಿ, ಮೊ.ಸಂ: 9448940321, ಅಧೀಕ್ಷಕ ಸಂಪತ್ ಕುಮಾರ್ 9945410865, ವಿಷಯ ನಿರ್ವಾಹಕ ಗಣೇಶ 9035348950 ನ್ನು ಸಂಪರ್ಕಿಸಬಹುದೆಂದು ಡಿಡಿಪಿಐ ತಿಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422