BREAKING NEWS – ಭದ್ರಾವತಿಯಲ್ಲಿ ಯುವಕನ ಕೊಲೆ

SHIVAMOGGA LIVE NEWS | 21 OCTOBER 2023

BHADRAVATHI : ವೈಯಕ್ತಿಕ ಕಾರಣಕ್ಕೆ ಭದ್ರಾವತಿಯ ಗೌಡ್ರಳ್ಳಿಯ ತೋಟವೊಂದರಲ್ಲಿ ವ್ಯಕ್ತಿಯೊಬ್ಬರ ಹತ್ಯೆ ಮಾಡಲಾಗಿದೆ. ಸಯ್ಯದ್‌ ರಾಜಿಖ್‌ (30) ಎಂಬಾತನ ಹತ್ಯೆಯಾಗಿದೆ. ಮಾರಕಾಸ್ತ್ರಗಳಿಂದ ದಾಳಿ (ATTACK) ನಡೆಸಲಾಗಿದೆ. ಗಂಭೀರ ಗಾಯಗೊಂಡಿದ್ದ ಸಯ್ಯದ್‌ ರಾಜಿಖ್‌ ಮೃತಪಟ್ಟಿದ್ದಾನೆ.

ಸಯ್ಯದ್‌ ರಾಜಿಖ್‌ ಎಂಬಾತನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. ಗಂಭೀರ ಗಾಯಗೊಂಡಿದ್ದು ಮೃತಪಟ್ಟಿದ್ದಾನೆ. ವೈಯಕ್ತಿಕ ಕಾರಣಕ್ಕೆ ಹತ್ಯೆಯಾಗಿದೆ ಎಂದು ಪ್ರಾಥಮಿಕ ತನಿಖೆ ವೇಳೆ ಗೊತ್ತಾಗಿದೆ. ಆರೋಪಿಯ ಕುರಿತು ಮಾಹಿತಿ ಲಭ್ಯವಾಗಿದ್ದು, ಬಂಧನವಾಗಲಿದೆ.ಮಿಥುನ್‌ ಕುಮಾರ್‌, ಜಿಲ್ಲಾ ರಕ್ಷಣಾಧಿಕಾರಿ

ಕಳೆದ ರಾತ್ರಿ ಘಟನೆ ಸಂಭವಿಸಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ರೈಲ್ವೆ ಗೇಟ್‌ಗೆ ಡಿಕ್ಕಿಯಾಗಿ ಪಲ್ಟಿ ಹೊಡೆದ ಕಾರು

BHADRAVATHI-BREAKING-NEWS.jpg

Leave a Comment