ಶಿವಮೊಗ್ಗದಲ್ಲಿ ಅಮೃತ ಕಳಶ ಹಿಡಿದು ಮೆರವಣಿಗೆ ಮಾಡಿದ ಸಂಸದ, ಏನಿದು ಕಳಶ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 21 OCTOBER 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ಮೇರಿ ಮಾಟಿ ಮೇರಾ ದೇಶ್ ಅಮೃತ ಕಳಶ (Amruta Kalasa) ಯಾತ್ರೆಗೆ ಶಿವಮೊಗ್ಗದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಚಾಲನೆ ನೀಡಿದರು.

ನಗರದಲ್ಲಿ ಮೆರವಣಿಗೆ

ಕಾರ್ಯಕ್ರಮದ ಅಂಗವಾಗಿ ನಗರದಲ್ಲಿ ಮೆರವಣಿಗೆ ನಡೆಯಿತು. ತಾಲ್ಲೂಕು ಪಂಚಾಯತ್ ಕಚೇರಿಯಿಂದ ಹೊರಟು ಡಿ.ಸಿ ಕಚೇರಿ ಮುಂಭಾಗದಿಂದ ಕೋರ್ಟ್ ರಸ್ತೆ ಮೂಲಕ ನೆಹರು ಒಳಾಂಗಣ ಕ್ರೀಡಾಂಗಣಕ್ಕೆ ತಲುಪಿತು. ಇದೇ ವೇಳೆ ಪಂಚಪ್ರಾಣ ಪ್ರತಿಜ್ಞೆಯನ್ನು ತೆಗೆದು ಕೊಳ್ಳಲಾಯಿತು.

ಮೇರಿ ಮಾಟಿ ಮೇರಾದೇಶ್ ಅಮೃತ ಕಳಶ ಯಾತ್ರೆಯು ದೇಶದ್ಯಾಂತ ಒಂದು ಪ್ರಮುಖ ಕಾರ್ಯಕ್ರಮವಾಗಿದ್ದು, ಎಲ್ಲಾ ಹಳ್ಳಿಯ ಮಣ್ಣನ್ನು  ಸಂಗ್ರಹಿಸಿ ದೆಹಲಿಯ ಕರ್ತವ್ಯ ಪಥ್‍ನಲ್ಲಿ ಉದ್ಯಾನವನ ನಿರ್ಮಿಸಲಾಗುವುದು.ಬಿ.ವೈ ರಾಘವೇಂದ್ರ, ಸಂಸದ

ಏನಿದು ಅಭಿಯಾನ?

ಶಿವಮೊಗ್ಗದ 7 ತಾಲೂಕಿನಲ್ಲು ಮೇರಿ ಮಾಟಿ ಮೇರಾ ದೇಶ್ ಅಮೃತ ಕಳಶ ಯಾತ್ರೆ ನಡೆಯಲಿದೆ. ಮಣ್ಣು ಸಂಗ್ರಹ ಕಾರ್ಯ ಮುಗಿದ ನಂತರ ಕಳಶವನ್ನು ನೆಹರು ಯುವ ಕೇಂದ್ರಕ್ಕೆ ಹಸ್ತಾಂತರಿಸಲಾಗುತ್ತದೆ. ಈ ಕಳಶವನ್ನು ರಾಷ್ಟ್ರೀಯ ಯುವ ಕಾರ್ಯಕರ್ತರು ದೆಹಲಿಗೆ ಕೊಂಡೊಯ್ಯಲಿದ್ದಾರೆ. ದೇಶಾದ್ಯಂತ ಮಣ್ಣು ಸಂಗ್ರಹ ಕಾರ್ಯ ನಡೆಯಲಿದೆ. ಅಕ್ಟೋಬರ್ ತಿಂಗಳಿನ ಕೊನೆಯಲ್ಲಿ ದೆಹಲಿಯಲ್ಲಿ ರಾಷ್ಟ್ರಮಟ್ಟದ ಕಾರ್ಯಕ್ರಮ ನಡೆಯಲಿದೆ. ಈ ಮಣ್ಣಿನಿಂದ ದೆಹಲಿಯಲ್ಲಿ ಅಮೃತ ವಾಟಿಕಾ (ಉದ್ಯಾನವನ) ಮತ್ತು ಇಂಡಿಯಾಗೇಟ್‌ನ ಕರ್ತವ್ಯ ಪಥ್‌ನಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಸ್ಮಾರಕ ಸ್ಥಾಪಿಸಲಾಗುತ್ತದೆ.

ಇದನ್ನೂ ಓದಿ – ಸವಳಂಗ ರಸ್ತೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲನೆ, ಯಾವಾಗ ಮುಗಿಯುತ್ತೆ? ಇಲ್ಲಿದೆ 3 ಪ್ರಮುಖಾಂಶ

ಶಿವಮೊಗ್ಗ ಶಾಸಕ ಎಸ್.ಎನ್‍.ಚನ್ನಬಸಪ್ಪ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿ.ಪಂ ಸಿಇಓ ಲೋಕಂಡೆ ಸ್ನೇಹಲ್ ಸುಧಾಕರ್, ತಾ. ಪಂ ಇಓ ಅವಿನಾಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್, ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್, ಶಿವಮೊಗ್ಗ ತಾಲ್ಲೂಕಿನ ಗ್ರಾ.ಪಂ ಪಿಡಿಓಗಳು, ಎನ್‍ಎಸ್‍ಎಸ್ ವಿಭಾಗದ ಅಧಿಕಾರಿಗಳು ಮತ್ತು ಕಾರ್ಯಕರ್ತರು, ವಿವಿಧ ಸಂಘಟನೆಗಳ ಕಾರ್ಯಕರ್ತರು, ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment