ಹಿಂಬದಿಯಿಂದ ಬಂದು ವಿದ್ಯಾರ್ಥಿನಿ ಕೊರಳಿಗೆ ಕೈ ಹಾಕಿದ ಅಪರಿಚಿತ, ಕಳ್ಳ ಕಳ್ಳ ಎಂದು ಕೂಗಿಕೊಳ್ಳುವಷ್ಟರಲ್ಲಿ ಮಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 24 OCTOBER 2023

SHIMOGA : ಹಿಂಬದಿಯಿಂದ ಬಂದ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯೊಬ್ಬಳ ಕೊರಳಲ್ಲಿದ್ದ ಚಿನ್ನದ ಸರ (Chain Theft) ಕಿತ್ತುಕೊಂಡು ಪರಾರಿಯಾಗಿದ್ದಾನೆ. ಜನ ದಟ್ಟಣೆ ಹೆಚ್ಚಿರುವ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಪ್ರವೇಶ ದ್ವಾರದಲ್ಲಿಯೇ ಘಟನೆ ಸಂಭವಿಸಿದೆ.

ತರೀಕೆರೆಯ ಮೇಘನಾ ಎಂಬುವವರ ಕೊರಳಲ್ಲಿದ್ದ 13 ಗ್ರಾಂ ತೂಕದ ಚಿನ್ನದ ಸರ ಕಿತ್ತುಕೊಳ್ಳಲು ಕಳ್ಳ ಪ್ರಯತ್ನಸಿದ್ದಾನೆ. ಈ ಸಂದರ್ಭ ಮೇಘನಾ ಸರವನ್ನು ಹಿಡಿದುಕೊಂಡಿದ್ದರಿಂದ 3.120 ಗ್ರಾಂ ಅವರ ಕೈಯಲ್ಲಿ ಉಳಿದಿದೆ. 9.880 ಗ್ರಾಂ ಸರವನ್ನು ಕಳ್ಳ ಕಿತ್ತು ಪರಾರಿಯಾಗಿದ್ದಾನೆ.

ಹೇಗಾಯ್ತು ಘಟನೆ?

ದಸರಾ ಹಬ್ಬದ ಹಿನ್ನೆಲೆ ವಿದ್ಯಾರ್ಥಿನಿ ಮೇಘನಾ ಅವರು ತಮ್ಮೂರಿಗೆ ತೆರಳಲು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಆಗಮಿಸಿದ್ದರು. ಕೆಎಸ್‌ಆರ್‌ಟಿಸಿ ಬಸ್ಸುಗಳು ನಿಲ್ದಾಣದಿಂದ ಹೊರಗೆ ಹೋಗುವ ಮಾರ್ಗದಲ್ಲಿ ಮೇಘನಾ ನಿಲ್ದಾಣದೊಳಗೆ ತೆರಳುತ್ತಿದ್ದರು. ಈ ಸಂದರ್ಭ ಹಿಂದಿನಿಂದ ಬಂದ ಸುಮಾರು 45 ವರ್ಷದ ವ್ಯಕ್ತಿಯೊಬ್ಬ ದಿಢೀರ್‌ ಆಕೆಯ ಕೊರಳಿಗೆ ಕೈ ಹಾಕಿ ಸರ ಎಳೆದುಕೊಂಡಿದ್ದಾನೆ.

ಮೇಘನಾ ಅವರು ಕಳ್ಳ ಎಂದು ಕೂಗಿಕೊಂಡಿದ್ದು ಜನ ಸೇರುವ ಹೊತ್ತಿಗೆ ಕಳ್ಳ ಪರಾರಿಯಾಗಿದ್ದ. ಅಂದಾಜು 40 ಸಾವಿರ ರೂ. ಮೌಲ್ಯದ ಸರ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 24, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment