ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 27 OCTOBER 2023
SHIMOGA : ಕಸ ತೆರವು ಮಾಡದ ವಿಚಾರವಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರೊಬ್ಬರ ಮೇಲೆ ಮಚ್ಚು, ದೊಣ್ಣೆಯಿಂದ ಹಲ್ಲೆ (Attack) ನಡೆಸಲಾಗಿದೆ. ಶಿವಮೊಗ್ಗ ತಾಲೂಕು ಹೊಳೆಬೆನವಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ಜಗದೀಶ್ ಎಂಬುವವರ ಮೇಲೆ ಹಲ್ಲೆಯಾಗಿದೆ.
ಸ್ವಚ್ಛತೆ ಬಳಿಕ ರಸ್ತೆ ಬದಿ ಕಸ
ಹೊಳೆಬೆನವಳ್ಳಿಯಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಗಿತ್ತು. ದಸರಾ ಹಬ್ಬದ ಹಿನ್ನೆಲೆ ಟ್ರಾಕ್ಟರ್ ಸಿಗದೆ ಕಸ ವಿಲೇವಾರಿ ವಿಳಂಬವಾಗಿತ್ತು. ಹಾಗಾಗಿ ರಸ್ತೆ ಬದಿಯಲ್ಲೇ ಕಸ ಬಿಡಲಾಗಿತ್ತು. ಇದೆ ವಿಚಾರವಾಗಿ ಇಬ್ಬರು ಗ್ರಾಮಸ್ಥರು ತಮ್ಮ ಸಂಬಂಧಿ ಪುರಲೆ ನಿವಾಸಿಯೊಬ್ಬನ ಜೊತೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಗದೀಶ್ ವಿರುದ್ಧ ಜಗಳವಾಡಿದ್ದಾರೆ.
ದೇಗುಲದ ಬಳಿ ಅಟ್ಯಾಕ್
ಅ.23ರಂದು ಸಂಜೆ ದೇವಸ್ಥಾನದ ಬಳಿ ನಿಂತಿದ್ದಾಗ ಮೂವರು ಆಗಮಿಸಿ ಅವಾಚ್ಯವಾಗಿ ನಿಂದಿಸಿ ಮಚ್ಚಿನಿಂದ ಎಡ ಕಿವಿಗೆ ಹಲ್ಲೆ ನಡೆಸಿದ್ದಾರೆ. ದೊಣ್ಣೆಯಿಂದ ಹೊಡೆಯಲು ಬಂದಾಗ ತಪ್ಪಿಸಿಕೊಂಡಿದ್ದಾಗಿ ದೂರಿನಲ್ಲಿ ಆರೋಪಿಸಿದ್ದಾರೆ. ಇದೇ ವೇಳೆ ಜಗದೀಶ್ ಅವರ ಸ್ನೇಹಿತರು ಜಗಳ ಬಿಡಿಸಿದ್ದಾರೆ. ಗಾಯಗೊಂಡಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಗದೀಶ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















