ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 OCTOBER 2023
SHIMOGA : ಕೇಂದ್ರ ಕಾರಾಗೃಹದಿಂದ (Central Jail) ಸ್ನೇಹಿತರಿಗೆ ವಿಡಿಯೋ ಕಾಲ್ ಮಾಡಿದ್ದ ಆರೋಪದ ಮೇಲೆ ನಾಲ್ವರು ವಿಚಾರಣಾಧೀನ ಖೈದಿಗಳ ವಿರುದ್ಧ ಜೈಲು ಅಧೀಕ್ಷಕಿ ಡಾ. ಅನಿತಾ ಅವರು ದೂರು ನೀಡಿದ್ದಾರೆ.
ವಿಚಾರಣಾಧೀನ ಖೈದಿಗಳಾದ ಮುಬಾರಕ್ ಅಲಿಯಾಸ್ ಡಿಚ್ಚಿ, ಸೈಯದ್ ಟಿಪ್ಪು ಸುಲ್ತಾನ್, ಶಾಬಾಜ್ ಷರೀಫ್, ಜಬೀರ್ ಪಾಷಾ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಏಪ್ರಿಲ್ 7ರಂದು ನಾಲ್ವರು ಆರೋಪಿಗಳು ಇನ್‌ಸ್ಟಾಗ್ರಾಂ ಮೂಲಕ ತಮ್ಮ ಸ್ನೇಹಿತರಿಗೆ ವಿಡಿಯೋ ಕಾಲ್ ಮಾಡಿದ್ದರು ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ- ಆನಂದಪುರದ ಅಂಗಡಿಗಳ ಬಾಗಿಲ ಬೀಗ ಒಡೆದ ಕಳ್ಳರು, ಏನೇನೆಲ್ಲ ಕದ್ದಿದ್ದಾರೆ?
ವಿಡಿಯೋಗಳನ್ನು ಪರಿಶೀಲಿಸಿದಾಗ ನಾಲ್ವರು ಆರೋಪಿಗಳಿಗೆ ಹೋಲಿಕೆ ಕಂಡು ಬಂದಿದೆ. ಈ ಹಿನ್ನೆಲೆ ಕಾರಗೃಹ ಮತ್ತು ಸುಧಾರಣಾ ಸೇವೆಯ ಉಪ ಮಹಾ ನಿರೀಕ್ಷಕರ ಸೂಚನೆ ಮೇರೆಗೆ ಅಧೀಕ್ಷಕಿ ಅನಿತಾ ಅವರು ದೂರು ನೀಡಿದ್ದಾರೆ. ಆರೋಪಿಗಳಿದ್ದ ಜೈಲಿನ ಸೆಲ್ ಮೇಲೆ ದಾಳಿ ನಡೆಸಿ ಪರಿಶೀಲಿಸಲಾಗಿದೆ. ಯಾವುದೆ ಮೊಬೈಲ್ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















