BREAKING NEWS – ಶಿವಮೊಗ್ಗದ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಮೇಲೆ ಐಟಿ ದಾಳಿ

SHIVAMOGGA LIVE NEWS | 31 OCTOBER 2023 (ಈ ಸುದ್ದಿಯನ್ನು ಇನ್ನು 36 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

SHIMOGA : ನಗರದ ಪ್ರತಿಷ್ಠಿತ ಆಭರಣ ಮಳಿಗೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ (IT Raid) ನಡೆಸಿದ್ದಾರೆ. ಮಳಿಗೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಶಿವಮೊಗ್ಗದ ಜೆಪಿಎನ್ ರಸ್ತೆಯಲ್ಲಿರುವ ಆಭರಣ ಮಳಿಗೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಎರಡು ಇನ್ನೋವಾ ಕಾರಿನಲ್ಲಿ ಆಗಮಿಸಿರುವ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಸುಮಾರು ಹತ್ತು ಅಧಿಕಾರಿಗಳು ದಾಳಿಯಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ – ಶಿವಮೊಗ್ಗದ ಗಾರ್ಡನ್‌ ಏರಿಯಾದಲ್ಲಿ ಟ್ರಾಫಿಕ್‌ ಪೊಲೀಸರ ದಾಳಿ, ಸೈಲೆನ್ಸರ್‌ಗಳು ಸೀಜ್‌

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ಇನ್ನು, ಐಟಿ ದಾಳಿ ಹಿನ್ನಲೆ ಆಭರಣ ಮಳಿಗೆಯಲ್ಲಿ ವ್ಯಾಪಾರ ನಿರ್ಬಂಧಿಸಲಾಗಿದೆ. ಗ್ರಾಹಕರು ಸೇರಿದಂತೆ ಯಾರೂ ಮಳಿಗೆಯ ಒಳ, ಹೊರ ಹೋಗದಂತೆ ನಿರ್ಬಂಧಿಸಲಾಗಿದೆ.

ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇರುವ ಆಭರಣ ಮಳಿಗೆಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ.

JOB NEWS

Jnanasudha Institutions Jobs
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment