ಶಿವಮೊಗ್ಗದಲ್ಲಿ ಕನ್ನಡದ ಪಥ ಸಂಚಲನ, ಮುಖ್ಯ ರಸ್ತೆಗಳಲ್ಲಿ ಜಾಗೃತಿ ಮೂಡಿಸಿದ ವಿದ್ಯಾರ್ಥಿ ಸಮೂಹ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 3 NOVEMBER 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು (ATNCC) ವಿದ್ಯಾರ್ಥಿಗಳು ನಗರದಲ್ಲಿ ಪಥ ಸಂಚಲನ (Procession) ನಡೆಸಿದರು. ಪ್ರಮುಖ ರಸ್ತೆಗಳಲ್ಲಿ ಸಾಗಿದ ವಿದ್ಯಾರ್ಥಿಗಳು ಕನ್ನಡ, ಕರ್ನಾಟಕದ ಹಿರಿಮೆ, ಭಾಷೆ ಬಳಕೆ ಕುರಿತು ಜಾಗೃತಿ ಮೂಡಿಸುವ ವಿವಿಧ ಭಿತ್ತಿ ಪತ್ರಗಳನ್ನು ಪ್ರದರ್ಶಿಸಿದರು.

ಎಟಿಎನ್‌ಸಿ ಕಾಲೇಜು ಆವರಣದಿಂದ ಕನ್ನಡ, ಕರ್ನಾಟಕದ ಪರ ಘೋಷಣೆ ಕೂಗುತ್ತ ವಿದ್ಯಾರ್ಥಿಗಳು ಮೆರವಣಿಗೆ ನಡೆಸಿದರು. ಬಸವೇಶ್ವರ ವೃತ್ತ, ಕರ್ನಾಟಕ ಸಂಘ, ಶಿವಪ್ಪನಾಯಕ ಪ್ರತಿಮೆ, ನೆಹರು ರಸ್ತೆ, ಗೋಪಿ ಸರ್ಕಲ್‌, ಮಹಾವೀರ ಸರ್ಕಲ್‌ ಮೂಲಕ ಎಟಿಎನ್‌ಸಿ ಕಾಲೇಜಿನವರೆಗೆ ಮೆರವಣಿಗೆ ನಡೆಸಲಾಯಿತು.

ಭುವನೇಶ್ವರಿಗೆ ನಮನ, ಸನ್ಮಾನ

ಇದಕ್ಕೂ ಮೊದಲು ಕಾಲೇಜು ಆವರಣದಲ್ಲಿ ಭುವನೇಶ್ವರಿಯ ದೊಡ್ಡ ಭಾವಚಿತ್ರಕ್ಕೆ ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ, ಎಟಿಎನ್‌ಸಿ ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳು ಪುಷ್ಪನಮನ ಸಲ್ಲಿಸಿದರು. ಬಳಿಕ ಚಂದನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ಸಂಘದ ಅಧ್ಯಕ್ಷ ಸುಂದರ ರಾಜ್‌ ಅವರನ್ನು ಸನ್ಮಾನಿಸಲಾಯಿತು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಕ್ರಾಂತಿದೀಪ ಮುದ್ರಣಾಲಯಕ್ಕೆ ಚಾಲನೆ, ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು?

ಎನ್‌ಇಎಸ್‌ ಕಾರ್ಯದರ್ಶಿ ನಾಗರಾಜ್‌, ಪ್ರಾಂಶುಪಾಲರಾದ ಮಮತಾ, ಕನ್ನಡ ವಿಭಾಗದ ಉಪನ್ಯಾಸಕ ಪ್ರವೀಣ್‌.ಬಿ.ಎನ್‌, ಗಾಯತ್ರ.ಟಿ, ವಾಣಿಜ್ಯ ವಿಭಾಗದ ಗನಶ್ಯಾಮ್, ಸತಿಭಾರತಿ ದಯಾನಂದ್‌, ನಕ್ಷಾ, ನವೀನ್‌ ತೇಲ್ಕರ್‌ ಸೇರಿದಂತೆ ಉಪನ್ಯಾಸಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Karnataka Rajyotsava in ATNC College

Karnataka Rajyotsava in ATNC College

Karnataka Rajyotsava in ATNC College

Karnataka Rajyotsava in ATNC College

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment