ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 5 NOVEMBER 2023
SHIMOGA : ಶಿವಮೊಗ್ಗ ರೈಲ್ವೆ ನಿಲ್ದಾಣ ಸಮೀಪ ಅನುಮಾನಾಸ್ಪದ ಬಾಕ್ಸ್ ಪತ್ತೆ ಪ್ರಕರಣ ಸಂಬಂಧ ಪೊಲೀಸ್ ಇಲಾಖೆ ಸಿಸಿಟಿವಿಗಳ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಾರು ಒಂದು ಪತ್ತೆಯಾಗಿದೆ. ಇನ್ನೊಂದೆಡೆ ಪ್ರಕರಣ ಸಂಬಂಧ ಓರ್ವ ವ್ಯಕ್ತಿ ತಿಪಟೂರಿನಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.
ರೈಲ್ವೆ ನಿಲ್ದಾಣ ಸಮೀಪ ಎರಡು ಅನುಮಾನಾಸ್ಪದ ಬಾಕ್ಸ್ ಪತ್ತೆಯಾಗಿತ್ತು. ಈ ಸಂಬಂಧ ಸಿಸಿಟಿವಿ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಒಂದು ಕಾರು ಪತ್ತೆಯಾಗಿದೆ.
ತಿಪಟೂರಿನಲ್ಲಿ ವ್ಯಕ್ತಿ ವಿಚಾರಣೆ?
ರೈಲ್ವೆ ನಿಲ್ದಾಣದ ಸಮೀಪ ಪಾರ್ಕಿಂಗ್ ಸ್ಥಳದಲ್ಲಿ ಕ್ಯಾಮರಾ ಅಳವಡಿಸಲಾಗಿದೆ. ಇದರಲ್ಲಿ ಒಂದು ಕಾರು ಪತ್ತೆಯಾಗಿದೆ. ಕಾರಿನ ನಂಬರ್ ಆಧರಿಸಿ ಪೊಲೀಸ್ ಇಲಾಖೆ ತನಿಖೆ ಆರಂಭಿಸಿದೆ.
ತಿಪಟೂರಿನಲ್ಲಿ ವ್ಯಕ್ತಿಯೊಬ್ಬನ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು, ಶಿವಮೊಗ್ಗದಲ್ಲಿ ಮತ್ತೊಬ್ಬನ ವಿಚಾರಣೆ ನಡೆಸಲಾಗಿದೆ ಎಂದು ಹೇಳಲಾಗಿದೆ.
ಇದನ್ಮೂ ಓದಿ – ಶಿವಮೊಗ್ಗದಲ್ಲಿ ಮೇಡ್ ಇನ್ ಬಾಂಗ್ಲಾದೇಶ ಬಾಕ್ಸ್, ರೈಲ್ವೆ ನಿಲ್ದಾಣದ ಬಳಿ ಆತಂಕ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422