ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 5 NOVEMBER 2023
SHIMOGA : ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾದ ಅನುಮಾನಾಸ್ಪದ ಬಾಕ್ಸ್ಗಳ ಪರಿಶೀಲನೆಗೆ ಬೆಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳ ಆಗಮಿಸಿದೆ. ಆದರೆ ಕಾರ್ಯಾಚರಣೆಗೆ ಮಳೆ ಅಡ್ಡಿಯಾಗಿದೆ.
ರೈಲ್ವೆ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಎರಡು ಬಾಕ್ಸ್ ಪತ್ತೆಯಾಗಿದ್ದವು. ಇದರಲ್ಲಿ ಸ್ಪೋಟಕ ಇರುವ ಶಂಕೆ ಹಿನ್ನಲೆ ಬೆಂಗಳೂರಿನಿಂದ ತಜ್ಞರ ತಂಡ ಆಗಮಿಸಿದೆ.
ಬಾಕ್ಸ್ ಶೋಧ ಕಾರ್ಯ
ಬಾಕ್ಸ್ ನಲ್ಲಿ ಏನಿದೆ ಎಂಬುದರ ಶೋಧ ಕಾರ್ಯ ನಡೆಸಲಾಯಿತು. ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಬಾಂಬ್ ಸೂಟ್ ಧರಿಸಿ ಬಂದು ಪರಿಶೀಲಿಸಿದರು. ಮೂರು ಬಾರಿ ಬಾಕ್ಸ್ ಸಮೀಪ ಆಗಮಿಸಿದ ಸಿಬ್ಬಂದಿ ವಿವಿಧ ಉಪಕರಣ ಬಳಸಿ ಪರಿಶೀಲಿಸಿದರು.
ಈ ವೇಳೆ ಜೋರು ಮಳೆ ಆರಂಭವಾಗಿದ್ದರಿಂದ ಪರಿಶೀಲನೆ ಕಾರ್ಯ ಸ್ಥಗಿತಗೊಳಿಸಲಾಗಿದೆ. ಸದ್ಯ ಎರಡು ಬಾಕ್ಸ್ಗಳನ್ನು ಪಾರ್ಕಿಂಗ್ ಸ್ಥಳದ ಸಮೀಪದಲ್ಲೆ ಇರಿಅಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಬೆಂಗಳೂರಿಂದ ಬಾಂಬ್ ನಿಷ್ಕ್ರಿಯ ದಳ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






