ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 7 NOVEMBER 2023
SHIMOGA : ನಗರದ ಸೈನ್ಸ್ ಮೈದಾನದಲ್ಲಿ ನ.8ರಂದು ಬೃಹತ್ ಉದ್ಯೋಗ ಮೇಳ (Job Mela) ಆಯೋಜಿಸಲಾಗಿದೆ. ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಬಿಇ ಮತ್ತು ಪದವಿ, ಸ್ನಾತಕೋತ್ತರ ಪದವಿ ಉತ್ತೀರ್ಣ, ಅನುತ್ತೀರ್ಣ ಹೊಂದಿದ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಆನ್‍ಲೈನ್ http://skillconnect.kaushalkar.com/candidatereg ರಲ್ಲಿ ಅಥವಾ ಸ್ಥಳದಲ್ಲೆ ನೇರವಾಗಿ ನೊಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸುರೇಶ್ ಹೆಚ್.ಎಂ. ದೂ.ಸಂ.: 08182-255294 / 9019485688 / 9880005425 ಇವರನ್ನು ಖುದ್ದಾಗಿ ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422