SHIVAMOGGA LIVE NEWS | 8 NOVEMBER 2023
SHIMOGA : ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಷ್.ಷಡಾಕ್ಷರಿ ಅವರನ್ನು ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾಯಿಸಲಾಗಿದೆ (Transferred). ಈ ಬೆಳವಣಿಗೆ ಸರ್ಕಾರಿ ನೌಕರರ ವಲಯದಲ್ಲಿ ಚರ್ಚೆ ಹುಟ್ಟಿಸಿದೆ. ಇನ್ನೊಂದೆಡೆ, ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.
ಕೋಲಾರಕ್ಕೆ ವರ್ಗಾವಣೆ ಮಾಡಿ ಆದೇಶ
ಶಿವಮೊಗ್ಗದ ಸ್ಥಳೀಯ ಲೆಕ್ಕ ಪರಿಶೋಧನಾ ವರ್ತುಲದ ಜಂಟಿ ನಿರ್ದೇಶಕರ ಕಚೇರಿಯ ಲೆಕ್ಕಾಧೀಕ್ಷಕರಾಗಿದ್ದ ಸಿ.ಎಸ್.ಷಡಾಕ್ಷರಿ ಅವರನ್ನು ಕೋಲಾರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧೀಕ್ಷಕರಾಗಿ ವರ್ಗಾಯಿಸಲಾಗಿದೆ. ಈ ಸಂಬಂಧ ಆರ್ಥಿಕ ಇಲಾಖೆಯ ಆಡಳಿತ ಮತ್ತು ಮುಂಗಡಗಳು ವಿಭಾಗದ ಅಧೀನ ಕಾರ್ಯದರ್ಶಿ ನೇತ್ರಪ್ರಭಾ ಎಂ.ಧಾಯಪುಲೆ ಅವರು ಆದೇಶಿಸಿದ್ದಾರೆ. ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಈ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.
ನೌಕರರ ವಲಯದಲ್ಲಿ ಚರ್ಚೆ
ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರ ವರ್ಗಾವಣೆ ನೌಕರರ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಆದೇಶ ಪ್ರತಿ ಹೊರ ಬೀಳುತ್ತಿದ್ದಂತೆ ಸರ್ಕಾರದ ನಡೆ ಕುರಿತು ಚರ್ಚೆ ಶುರುವಾಗಿದೆ. ಸಾಮಾನ್ಯವಾಗಿ ನೌಕರರ ಸಂಘದ ಪದಾಧಿಕಾರಿಗಳನ್ನು ಸರ್ಕಾರಗಳು ವರ್ಗಾಯಿಸುವುದಿಲ್ಲ. ಆದರೆ ಈಗ ರಾಜ್ಯಾಧ್ಯಕ್ಷರನ್ನೆ ವರ್ಗಾಯಿಸಿರುವುದು ನೌಕರರ ಸಂಘದ ಪದಾಧಿಕಾರಿಗಳಲ್ಲಿ ಗೊಂದಲ ಮೂಡಿಸಿದೆ.
ರಾಜಕೀಯ ಕೆಸರೆರಚಾಟ ಶುರು
ಸಿ.ಎಸ್.ಷಡಾಕ್ಷರಿ ಅವರ ವರ್ಗಾವಣೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಬೆಳವಣಿಗೆಯನ್ನು ಸಮರ್ಥಿಸಿಕೊಂಡಿದ್ದರೆ ಸಂಸದರು ವರ್ಗಾವಣೆಯನ್ನು ಕಟುವಾಗಿ ಟೀಕಿಸಿದ್ದಾರೆ.
ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಧಿಕಾರಿಗಳ ಸಹಕಾರದಿಂದ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ಮಾಡಿದ್ದೆವು. ಆದರೆ ದ್ವೇಷದ ರಾಜಕಾರಣ ಮಾಡಿಲ್ಲ. ಇಂತಹ ಬೆಳವಣಿಗೆ ಇತ್ತೀಚೆಗೆ ನಡೆಯುತ್ತಿದೆ. ಏಳನೆ ವೇತನ ಆಯೋಗ ರಚನೆ ಮಾಡಿ ಬಸವರಾಜ ಬೊಮ್ಮಾಯಿ ಅವರು ಮಧ್ಯಂತರ ವರದಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದರು. ಈ ವೇತನ ಆಯೋಗದ ಅವಧಿಯನ್ನು ಸರ್ಕಾರ ಈಗ ಮುಂದುವರೆಸಿದೆ. ಇರುವ ಅಧಿಕಾರಿಗಳನ್ನು ಬಳಸಿ ಉತ್ತಮ ಕೆಲಸ ಮಾಡಬೇಕು. ಕೆಲವು ಪಂಚಾಯಿತಿಗಳಲ್ಲಿ ಆರು ತಿಂಗಳಲ್ಲಿ ಮೂರ್ನಾಲ್ಕು ಪಿಡಿಒಗಳನ್ನು ವರ್ಗಾಯಿಸಿದ್ದಾರೆ. ಬರಗಾಲದ ಪರಿಸ್ಥಿತಿಯಲ್ಲಿ ವರ್ಗಾವಣೆ ಅಗತ್ಯವಿದೆಯಾ ಎಂದು ಪ್ರಶ್ನಿಸಿದರು.
ಸಿ.ಎಸ್.ಷಡಾಕ್ಷರಿ ಅವರ ವರ್ಗಾವಣೆ ಸರ್ಕಾರದ ಆಡಳಿತಾತ್ಮಕ ನಿರ್ಧಾರವಾದರು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ನೌಕರರ ವಲಯದಲ್ಲಿಯು ಅಸಮಾಧಾನಕ್ಕೆ ಮತ್ತು ಚರ್ಚೆ ಹುಟ್ಟಿಸಿದೆ.
ಇದನ್ನೂ ಓದಿ – ‘ಹೆದರಿ ಓಡಿ ಹೋಗಲು ನಾನು ಕುಮಾರ್ ಬಂಗಾರಪ್ಪ ಅಲ್ಲ’
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200