ಸಿಂಗನಮನೆ, ಶಾಂತಿನಗರದಲ್ಲಿ ಇಬ್ಬರು ವಶಕ್ಕೆ, ಭದ್ರಾವತಿಯಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ಅರೆಸ್ಟ್‌, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 NOVEMBER 2023

BHADRAVATHI : ಪ್ರತ್ಯೇಕ ಪ್ರಕರಣದಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭದ್ರಾವತಿಯಲ್ಲಿ ವೈದ್ಯಕೀಯ ಪರೀಕ್ಷೆ ನಂತರ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಿದ್ದಾರೆ (Arrest).

ಭದ್ರಾವತಿ ತಾಲೂಕು ಸಿಂಗನಬಿದರೆಯಲ್ಲಿ ದಾವಣಗೆರೆಯ ಕಿರಣ್‌, ಶಾಂತಿನಗರದಲ್ಲಿ ಜೀಶಾನ್‌ ಎಂಬಾತನನ್ನು ವಶಕ್ಕೆ ಪಡೆಯಲಾಗಿತ್ತು.

ಸಿಂಗನಮನೆ ಪ್ರಕರಣ

ಸಿಂಗನಮನೆ ಗ್ರಾಮದ ಸ್ಮಶಾನದ ಸಮೀಪ ದಾವಣಗೆರೆ ಜಿಲ್ಲೆಯ ಕಿರಣ್‌ ಎಂಬಾತನನ್ನು ವಶಕ್ಕೆ ಪಡೆಯಲಾಗಿತ್ತು. ಅನುಮಾನಾಸ್ಪದವಾಗಿ ವರ್ತಿಸುತ್ತಿರುವ ಕುರಿತು ಗಸ್ತು ತಿರುಗುತ್ತಿದ್ದ ಭದ್ರಾವತಿ ಗ್ರಾಮಾಂತರ ಠಾಣೆ ಸಿಬ್ಬಂದಿ ವಿನಾಯಕ ಅವರಿಗೆ ಮಾಹಿತಿ ಲಭ್ಯವಾಗಿತ್ತು. ಗಾಂಜಾ ಸೇವನೆ ಮಾಡಿರುವ ಅನುಮಾನ ವ್ಯಕ್ತವಾಗಿತ್ತು.

ಇದನ್ನೂ ಓದಿ- ರೈಲ್ವೆ ನಿಲ್ದಾಣದ ಮುಂದೆ ಎರಡು ಸ್ಪೋಟ, ರಾತ್ರಿ 2.40ಕ್ಕೆ ಮೊದಲ ಬ್ಲಾಸ್ಟ್‌, 3.24ಕ್ಕೆ ಎರಡನೇ ಸ್ಪೋಟ, ಕಾರಣವೇನು?

ಶಾಂತಿನಗರ ಪ್ರಕರಣ

ಶಾಂತಿನಗರದ ಗರಿಕೆಕೆರೆ ‍ಶ್ರೀ ಚೌಡೇಶ್ವರಿ ದೇವಸ್ಥಾನದ ಸಮೀಪ ಶಿವಮೊಗ್ಗದ ಜೀಶಾನ್‌ ಎಂಬಾತ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ. ಗಸ್ತು ತಿರುಗುತ್ತಿದ್ದ ಭದ್ರಾವತಿ ಗ್ರಾಮಾಂತರ ಠಾಣೆ ಸಿಬ್ಬಂದಿ ಸುನಿಲ್‌ ಬಾಸೂರು ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿ ಜೀಶಾನ್‌ನನ್ನು ವಶಕ್ಕೆ ಪಡೆದಿದ್ದಾರೆ. ವೈದ್ಯಕೀಯ ಪರೀಕ್ಷೆ ಬಳಿಕ ಮಾದಕ ವಸ್ತು ಸೇವನೆ ಮಾಡಿರುವುದು ಖಚಿತವಾಗಿದೆ.

ಆರೋಪಿಗಳ ವಿರುದ್ಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 11, 2023

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

Leave a Comment