8 ಕಾರು ಸಹಿತ ಸಿಕ್ಕಿಬಿದ್ದ ಗುಂಡನ ವಿರುದ್ಧ ದಾಖಲಾಯ್ತು ಮತ್ತೊಂದು ಕೇಸ್‌, ಭದ್ರಾವತಿ ಮಹಿಳೆಯಿಂದ ದೂರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 NOVEMBER 2023

SHIMOGA : ‘ಪತ್ನಿಗೆ ಹುಷಾರಿಲ್ಲ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಬೇಕುʼ ಎಂದು ತಿಳಿಸಿ ಇನ್ನೋವಾ ಕಾರು ಪಡೆದು ಹಿಂತಿರುಗಿಸದ ಕಿರಣ್‌ ಅಲಿಯಾಸ್‌ ಗುಂಡನ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.

ಕಿರಣ್‌ ಕುಮಾರ್‌ ಮತ್ತು ಸಂತೋಷ್‌ ಎಂಬುವವರು ಭದ್ರಾವತಿಯ ಜಯಲಕ್ಷ್ಮಿ ಅವರ ಇನ್ನೋವಾ ಕಾರು ಪಡೆದಿದ್ದರು. ಜಯಲಕ್ಷ್ಮಿ ಅವರ ಪತಿಗೆ ಕಿರಣ್‌ ಕುಮಾರ್‌ ಪರಿಚಿತನಾಗಿದ್ದರಿಂದ ಕಾರು ಕೊಟ್ಟಿದ್ದರು. ಸೆ.27ರಂದು ಶಿವಮೊಗ್ಗದ ಖಾಸಗಿ ಬಸ್‌ ನಿಲ್ದಾಣದ ಬಳಿಯಿಂದ ಕಾರು ಪಡೆದು ಈತನಕ ಹಿಂತಿರುಗಿಸಿರಲಿಲ್ಲ ಎಂದು ಆರೋಪಿಸಲಾಗಿದೆ.

ಸಿಕ್ಕಿಬಿದ್ದ ಗುಂಡನ ಬಳಿ 8 ಕಾರು

ಕಿರಣ್‌ ಕುಮಾರ್‌ ಅಲಿಯಾಸ್‌ ಗುಂಡನ ವಿರುದ್ಧ ಇದೇ ರೀತಿ ಹಲವು ಆರೋಪಗಳಿವೆ. ಈಗಾಗಲೇ ದೊಡ್ಡಪೇಟೆ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆತ ಬಳಿ 10 ಲಕ್ಷ ರೂ. ಮೌಲ್ಯದ 8 ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. 2 ಟೊಯೋಟಾ ಇನ್ನೋವಾ, 3 ಸ್ವಿಫ್ಟ್  ಡಿಸೈರ್ ಮತ್ತು 3 ಮಾರುತಿ ಸುಜುಕಿ ಎರ್ಟಿಗಾ ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ – ಪರಿಚಿತ ಅಂತಾ ಇನ್ನೋವಾ ಕಾರು ಕೊಟ್ಟರು, ಆಮೇಲೆ ಕಾರು ಇಲ್ಲ, ವ್ಯಕ್ತಿನೂ ಇಲ್ಲ, GPS ಚೆಕ್‌ ಮಾಡಿದಾಗ ಶಾಕ್

ವಿಶೇಷ ತಂಡದಿಂದ ಕಾರ್ಯಾಚರಣೆ

ಆರೋಪಿ ಮತ್ತು ಕಾರುಗಳ ಪತ್ತೆಗೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಬಾಲರಾಜ್.ಬಿ ಮೇಲ್ವಿಚಾರಣೆಯಲ್ಲಿ ಇನ್ಸ್‌ಪೆಕ್ಟರ್‌ ಅಂಜನ್ ಕುಮಾರ್ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಪಿಎಸ್‌ಐ ಮಂಜಮ್ಮ , ಸಿಬ್ಬಂದಿ ಲಚ್ಚಾನಾಯ್ಕ, ಪಾಲಾಕ್ಷನಾಯ್ಕ, ರಮೇಶ್, ನಿತಿನ್ ಮತ್ತು ಚಂದ್ರನಾಯ್ಕ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ – ಸಿಗಂದೂರು ಸೇತುವೆ ಮೇಲಿಂದ ಬಿದ್ದು ಕಾರ್ಮಿಕ ಸಾವು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 12, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment