17 ವರ್ಷದ ಅಪ್ರಾಪ್ತನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ, 10 ಸಾವಿರ ರೂ. ದಂಡ, ಶಿವಮೊಗ್ಗ ನ್ಯಾಯಾಲಯದ ಆದೇಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 NOVEMBER 2023

SHIMOGA : ಮೂರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಸಾಬೀತಾದ ಹಿನ್ನೆಲೆ ಅಪ್ರಾಪ್ತನಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

2021ರಲ್ಲಿ ಶಿಕಾರಿಪುರದಲ್ಲಿ 3 ವರ್ಷದ ಬಾಲಕಿ ಮೇಲೆ 17 ವರ್ಷ ಬಾಲಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದ. ಬಾಲಕಿ ತಾಯಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ್ದ ಶಿವಮೊಗ್ಗ ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್‌ ಜೆ.ಲಕ್ಷ್ಮಣ್‌ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಲಕ್ಷ ಲಕ್ಷ ಮೌಲ್ಯದ ಅತ್ಯಂತ ಅಪರೂಪದ ನಾಟ ವಶ, ರಾಜ್ಯದಲ್ಲೇ ಮೊದಲು ಇಂತಹ ಪ್ರಕರಣ

ಆರೋಪ ಸಾಬೀತಾದ ಹಿನ್ನೆಲೆ ವಿಚಾರಣೆ ನಡೆಸಿದ ಶಿವಮೊಗ್ಗದ ಎಫ್‌ಟಿಎಸ್‌ಸಿ ನ್ಯಾಯಾಲಯದ ನ್ಯಾ.ಲತಾ ಅವರು ಶಿಕ್ಷೆ ವಿಧಿಸಿದ್ದಾರೆ. ಅಪ್ರಾಪ್ತ ಬಾಲಕನಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡ ಕಟ್ಟಲು ವಿಫಲವಾದರೆ 1 ತಿಂಗಳು ಹೆಚ್ಚುವರಿ ಸಾದಾ ಕಾರಗೃಹ ಶಿಕ್ಷೆ ವಿಧಿಸಲಾಗಿದೆ. ಸರ್ಕಾರದ ಪರವಾಗಿ ಅಭಿಯೋಜಕರಾದ ಹರಿಪ್ರಸಾದ್‌ ಮತ್ತು ಮಮತಾ ವಾದ ಮಂಡಿಸಿದ್ದರು.

ಇದನ್ನೂ ಓದಿ – ಸಿಗಂದೂರು ಸೇತುವೆ ಮೇಲಿಂದ ಬಿದ್ದು ಕಾರ್ಮಿಕ ಸಾವು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 12, 2023

Leave a Comment