ಆಯನೂರಿನ ಇಬ್ಬರು ಶಿವಮೊಗ್ಗದಲ್ಲಿ ವಶಕ್ಕೆ, ವೈದ್ಯಕೀಯ ಪರೀಕ್ಷೆ ಬಳಿಕ ಅರೆಸ್ಟ್‌, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 NOVEMBER 2023

SHIMOGA : ಗಾಂಜಾ ಮತ್ತಿನಲ್ಲಿದ್ದ ಇಬ್ಬರು ಯುವಕರನ್ನು (youths) ತುಂಗಾ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು.

ಕೇಸ್‌ 1  : ದ್ರೌಪದಮ್ಮ ಸರ್ಕಲ್‌

ಆಯನೂರಿನ ಸಯ್ಯದ್‌ ನವೀದ್‌ ಎಂಬಾತ ದ್ರೌಪದಮ್ಮ ಸರ್ಕಲ್‌ ಸಮೀಪ ಅಸಭ್ಯವಾಗಿ ವರ್ತಿಸುತ್ತಿರುವ ಕುರಿತು ದೂರು ಬಂದಿತ್ತು. ಈ ಹಿನ್ನೆಲೆ ಪೊಲೀಸರು ಆತನನ್ನು ವಶಕ್ಕೆ ಪಡೆದು ಮೆಗ್ಗಾನ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಈ ವೇಳೆ ಗಾಂಜಾ ಸೇವನೆ ದೃಢವಾಗಿದೆ.

ಇದನ್ನೂ ಓದಿ- ಶಿವಮೊಗ್ಗದಲ್ಲಿ ಲಕ್ಷ ಲಕ್ಷ ಮೌಲ್ಯದ ಅತ್ಯಂತ ಅಪರೂಪದ ನಾಟ ವಶ, ರಾಜ್ಯದಲ್ಲೇ ಮೊದಲು ಇಂತಹ ಪ್ರಕರಣ

ಕೇಸ್‌ 2 : ಜೆ.ಪಿ.ನಗರ

ಜೆ.ಪಿ.ನಗರದ ಜಂಡೆಕಟ್ಟೆ ಬಳಿ ಆಯನೂರಿನ ಸೈಯದ್‌ ಯಾಸೀನ್‌ ಎಂಬಾತ ಅಸಭ್ಯವಾಗಿ ವರ್ತಿಸುತ್ತಿದ್ದ. ಈತನನ್ನೂ ಮೆಗ್ಗಾನ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢವಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 14, 2023

Leave a Comment