ಕಾರ್ಮಿಕನ ಕಾಲಿನ 2 ಬೆರಳು ಕಟ್‌, 2 ಕೈ ಕತ್ತರಿಸಲು ಸಿದ್ಧವಾದ ಡಾಕ್ಟರ್‌, ಮೂವರ ವಿರುದ್ಧ ಕೇಸ್‌, ಏನಿದು ಪ್ರಕರಣ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 NOVEMBER 2023

SHIMOGA : ಮನೆಯೊಂದರ ಪೇಂಟಿಂಗ್‌ ಕೆಲಸದ ವೇಳೆ ಕಾರ್ಮಿಕನಿಗೆ ವಿದ್ಯುತ್‌ ಶಾಕ್‌ (Shock) ತಗುಲಿದ್ದು ಗಂಭೀರ ಗಾಯಗೊಂಡಿದ್ದಾನೆ. ಆತನನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಿದ್ದು ಕಾಲಿನ ಎರಡು ಬೆರಳು ಕತ್ತರಿಸಲಾಗಿದೆ. ಎರಡು ಕೈಗಳನ್ನು ಕೂಡ ಕತ್ತರಿಸಿ ತೆಗೆಯಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ದೂರಿನಲ್ಲಿ ಆಪಾದಿಸಲಾಗಿದೆ.

ಏನಿದು ಪ್ರಕರಣ?

ಅಶೋಕ ನಗರದ ಚೇತನ್‌ ಕುಮಾರ್‌ (30) ಎಂಬಾತನನ್ನು ಪೇಂಟಿಂಗ್‌ ಕೆಲಸಕ್ಕೆಂದು ಮೇಸ್ತ್ರಿಯೊಬ್ಬರು ಗುಡ್ಡದ ಅರಕೆರೆಗೆ ಕರೆದೊಯ್ದಿದ್ದರು. ಅಲ್ಯುಮೀನಿಯಂ ಸ್ಟಿಕ್‌ ಹಿಡಿದು ಪೇಂಟಿಂಗ್‌ ಮಾಡುವಾಗ ಮನೆ ಮುಂಭಾಗ ಹಾದು ಹೋಗಿರುವ ವಿದ್ಯುತ್‌ ತಂತಿಗೆ ತಗುಲಿದೆ. ವಿದ್ಯುತ್‌ ಶಾಕ್‌ ಹೊಡೆದು ಚೇತನ್‌ ಕುಮಾರ್‌ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ.

ಇದನ್ನೂ ಓದಿ- ಸಿಂಗನಮನೆ, ಶಾಂತಿನಗರದಲ್ಲಿ ಇಬ್ಬರು ವಶಕ್ಕೆ, ಭದ್ರಾವತಿಯಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ಅರೆಸ್ಟ್‌, ಕಾರಣವೇನು?

ಬೆರಳು ಕಟ್‌, ಕೈ ಕತ್ತರಿಸುವ ಸೂಚನೆ

ಚೇತನ್‌ ಕುಮಾರ್‌ನನ್ನು ಕೂಡಲೆ ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಎರಡು ಕಾಲು, ಎರಡು ಕೈಗಳು ಮತ್ತು ಹೊಟ್ಟೆ ಭಾಗದಲ್ಲಿ ತೀವ್ರ ಸುಟ್ಟ ಗಾಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈಗಾಗಲೆ ಬಲಗಾಲಿನ ಎರಡು ಬೆರಳು ಕತ್ತರಿಸಿ ತೆಗೆಯಲಾಗಿದೆ. ಎರಡು ಕೈಗಳನ್ನು ಕತ್ತರಿಸಿ ತೆಗೆಯಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇಂಜಿನಿಯರ್‌, ಗುತ್ತಿಗೆದಾರ ಮತ್ತು ಮನೆ ಮಾಲೀಕರ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪಿಸಿ ಚೇತನ್‌ ಕುಮಾರ್‌ ಕುಟುಂಬ ದೂರು ನೀಡಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 14, 2023

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

Leave a Comment