ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 15 NOVEMBER 2023
BHADRAVATHI : ನಗರದಲ್ಲಿ ವರ್ಷದಿಂದ ವರ್ಷಕ್ಕೆ ಡೆಂಗಿ (Dengue) ಪ್ರಕರಣ ಹೆಚ್ಚಾಗುತ್ತಿದ್ದು ಜನರಲ್ಲಿ ಆತಂಕ ಮೂಡಿಸಿದೆ. ಈ ಮಧ್ಯೆ ನಗರಸಭೆ ವತಿಯಿಂದ ಜಾಗೃತಿ ಮೂಡಿಸಲಾಗುತ್ತಿದ್ದು, ಜನ ಎಚ್ಚೆತ್ತುಕೊಂಡರೆ ಡೆಂಗಿಯಿಂದ ಪರಾಗಬಹುದಾಗಿದೆ.
ವರ್ಷದಿಂದ ವರ್ಷಕ್ಕೆ ಹೆಚ್ಚಳ
ಭದ್ರಾವತಿಯಲ್ಲಿ ಈ ವರ್ಷ ಜನರಿಯಿಂದ ಅಕ್ಟೋಬರ್ ತಿಂಗಳ ಕೊನೆಯವರೆಗೆ 82 ಡೆಂಗಿ (Dengue) ಪ್ರಕರಣ ವರದಿಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 72 ಪ್ರಕರಣ ಇತ್ತು. 2021ರಲ್ಲಿ 78 ಡೆಂಗಿ ಪ್ರಕರಣಗಳು ಪತ್ತೆಯಾಗಿದ್ದವು. ವರ್ಷದಿಂದ ವರ್ಷಕ್ಕೆ ಡೆಂಗಿ ಪ್ರಕರಣ ಏರಿಕೆಯಾಗುತ್ತಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ವಾಹನಗಳನ್ನು ಅಡ್ಡಗಟ್ಟಿ ದರೋಡೆಗೆ ಸ್ಕೆಚ್, ರಾಡ್, ಲಾಂಗ್, ಖಾರದ ಪುಡಿ ಸಹಿತ ಸಿಕ್ಕಿಬಿತ್ತು ಗ್ಯಾಂಗ್
ಎಲ್ಲೆಲ್ಲಿ ಪ್ರಕರಣ ಹೆಚ್ಚು?
ಭದ್ರಾವತಿ ನಗರದ ಭೂತನಗುಡಿ, ಹೊಸಮನೆ, ಅನ್ವರ್ ಕಾಲೋನಿ, ಜನ್ನಾಪುರ, ಹತ್ತಾ ಕಾಲೋನಿ, ಭದ್ರಾ ಕಾಲೋನಿ, ಗಾಂಧಿ ನಗರ, ಉಜ್ಜನಿಪುರ, ವಿದ್ಯಾಮಂದಿರ, ಗಣೇಶ ಕಾಲೋನಿ ಸೇರಿದಂತೆ ಸುತ್ತಮುತ್ತಲ ಬಡಾವಣೆಗಳಲ್ಲಿ ಡೆಂಗಿ ಪ್ರಕರಣ ಹೆಚ್ಚಾಗಿದೆ.
ಚರಂಡಿಗಳನ್ನು ಸಮರ್ಪಕವಾಗಿ ಸ್ವಚ್ಛಗೊಳಿಸದೆ ಇರುವುದೆ ಸೊಳ್ಳೆ ಉತ್ಪತ್ತಿಗೆ ಪ್ರಮುಖ ಕಾರಣ ಎಂದು ಸ್ಥಳೀಯರು ದೂರುತ್ತಾರೆ. ಆದರೆ ತೋಟಗಳಲ್ಲಿ ಬಿದ್ದ ಮತ್ತು ಸಂಗ್ರಹಿಸಿಟ್ಟ ಅಡಿಕೆ ಹಾಳೆಯಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗುತ್ತಿವೆ. ಈ ಕುರಿತು ಸಮೀಕ್ಷೆಯಿಂದ ತಿಳಿದು ಬಂದಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸುತ್ತಾರೆ.
ಇದನ್ನೂ ಓದಿ – ಫ್ರೀಡಂ ಪಾರ್ಕ್ ಪಟಾಕಿ ಅಂಗಡಿಗಳಲ್ಲಿ ಕಾರ್ಮಿಕ ಇಲಾಖೆಯಿಂದ ತಪಾಸಣೆ, ಜಾಗೃತಿ
ಜ್ವರ, ತಲೆನೋವು, ಕೀಲು ಮತ್ತು ಸ್ನಾಯುಗಳಲ್ಲಿ ನೋವು ಮತ್ತು ಸೆಳೆತ, ಕಣ್ಣುಗಳ ಹಿಂಬದಿ ನೋವು ಸೇರಿದಂತೆ ವಿವಿಧ ಲಕ್ಷಣಗಳಿವೆ. ಇಂತಹ ಆರೋಗ್ಯ ಸಮಸ್ಯೆ ಎದುರಾದಾಗ ಜನರು ತಕ್ಷಣ ವೈದ್ಯಕೀಯ ನೆರವು ಪಡೆಯುವುದು ಸೂಕ್ತ. ಸದ್ಯ ನಗರಸಭೆ ವತಿಯಿಂದ ವಿವಿಧ ಬಡಾವಣೆಗಳಲ್ಲಿ ಫಾಗಿಂಗ್ ಮಾಡಲಾಗುತ್ತಿದೆ. ಆಶಾ ಕಾರ್ಯಕರ್ತೆಯರಿಂದ ಜಾಗೃತಿ ಮೂಡಿಸಲಾಗುತ್ತಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422