ಶಿವಮೊಗ್ಗದಲ್ಲಿ ಮೈಸೂರು ರಂಗಾಯಣದಿಂದ 2 ನಾಟಕ, ಸಾಗರದಲ್ಲಿ ಗ್ಲಾನಿ ಪ್ರದರ್ಶನ, ಯಾವಾಗ? ಎಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 NOVEMBER 2023

SHIMOGA : ಮೈಸೂರು ರಂಗಾಯಣವು ಶಿವಮೊಗ್ಗ ರಂಗಾಯಣದ ಸಹಯೋಗದೊಂದಿಗೆ ‘ಮುಟ್ಟಿಸಿಕೊಂಡವನು’ ಹಾಗೂ ‘ಕಸಾಂದ್ರ ಮತ್ತು ಸತಿ’ ನಾಟಕಗಳ (Drama) ಪ್ರದರ್ಶನ ಆಯೋಜಿಸಲಾಗಿದೆ.

ಶಿವಮೊಗ್ಗ ರಂಗಾಯಣದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ನ.18ರಂದು ‘ಮುಟ್ಟಿಸಿಕೊಂಡವನು’ ನಾಟಕ, ನ.19ರಂದು ‘ಕಸಾಂದ್ರ ಮತ್ತು ಸತಿ’ ನಾಟಕ ಪ್ರದರ್ಶನ ಆಯೋಜಿಸಲಾಗಿದೆ.

mysore rangayana

‘ಮುಟ್ಟಿಸಿಕೊಂಡವನು’ ನಾಟಕ ಪಿ. ಲಂಕೇಶ್ ಕಥೆಯಾಧಾರಿತವಾದದ್ದು. ರಂಗಾಯಣದ ಹಿರಿಯ ಕಲಾವಿದೆ ನಂದಿನಿ ಕೆ.ಆರ್. ಅವರು ನಿರ್ದೆಶಿಸಿದ್ದಾರೆ. ‘ಕಸಾಂದ್ರ ಮತ್ತು ಸತಿ’ ನಾಟಕ ಹೆಚ್.ಎಸ್. ಶಿವಪ್ರಕಾಶ್ ಅವರು ರಚಿಸಿದ್ದಾರೆ. ಮೊದಲ ಬಾರಿಗೆ ಎರಡು ನಾಟಕಗಳನ್ನು ಸೇರಿಸಿ ಪ್ರದರ್ಶಿಸುತ್ತಿರುವ ಹೊಸ ರಂಗಪ್ರಯೋಗ ಇದಾಗಿದೆ. ಈ ನಾಟಕವನ್ನು ಹೆಗ್ಗೋಡಿನ ಹಿರಿಯ ರಂಗ ನಿರ್ದೇಶಕರಾದ ಶ್ರೀ ಬಿ.ಆರ್. ವೆಂಕಟರಮಣ ಐತಾಳ ಅವರು ನಿರ್ದೇಶನ ಮಾಡಿದ್ದಾರೆ.

ಸಾಗರದಲ್ಲಿ ಗ್ಲಾನಿ ನಾಟಕ ಪ್ರದರ್ಶನ

ರಂಗಕರ್ಮಿ ಡಾ. ಗುರುರಾವ್ ಬಾಪಟ ಅವರ ನೆನಪಿನಲ್ಲಿ ನ.20ರಂದು ಎಲ್‌.ಬಿ.ಕಾಲೇಜಿನ ದೇವರಾಜ ಅರಸು ಕಲಾಕ್ಷೇತ್ರದ ಆವರನದಲ್ಲಿ ‘ಗ್ಲಾನಿ’ ನಾಟಕ ಪ್ರದರ್ಶನ ಆಯೋಜಿಸಲಾಗಿದೆ. ಈ ನಾಟಕವನ್ನು ಸಾಗರದ ಜಿ.ಎಸ್. ಭಟ್ಟ ಅವರು ರಚಿಸಿದ್ದಾರೆ. ಉದಯ ಕಲಾವಿದರು ರಂಗ ಸಂಸ್ಥೆ ನೇತೃತ್ವದಲ್ಲಿ ನಾಟಕ ಆಯೋಜಿಸಲಾಗಿದೆ. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಂಗ ನಿರ್ದೇಶಕರಾದ ಚಿದಂಬರರಾವ್ ಜಂಬೆ ನಾಟಕದ ನಿರ್ದೇಶನ ಮಾಡಿದ್ದಾರೆ. ನಾಟಕಕ್ಕೆ ಪ್ರವೇಶ ಉಚಿತ ಇರಲಿದೆ ಎಂದು ಇಲ್ಲಿನ ವಿನೋಬಾ ನಗರದ ನಿಧಿ ಪ್ರಕಾಶನ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ – ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ವಾಟ್ಸಪ್‌‌ನಲ್ಲಿ ಡೇಟ್ ವೈರಲ್, ದೇಗುಲ ಸಮಿತಿ ಹೇಳಿದ್ದೆ ಬೇರೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 15, 2023

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment