ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 NOVEMBER 2023
SHIMOGA : ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಿಗೆ ನೂತನ ಇನ್ಸ್‌ಪೆಕ್ಟರ್‌ಗಳನ್ನು (Inspectors) ನಿಯೋಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಜಿಲ್ಲೆಯಲ್ಲಿ ಖಾಲಿ ಉಳಿದಿದ್ದ ಇನ್ಸ್‌ಪೆಕ್ಟರ್ ಹುದ್ದೆಗಳು ಭರ್ತಿಯಾಗಿವೆ.
ಯಾವ್ಯಾವ ಠಾಣೆಗೆ ಯಾರು ವರ್ಗಾವಣೆ?
ದೊಡ್ಡಪೇಟೆ ಪೊಲೀಸ್ ಠಾಣೆ : ಸಿಐಡಿಯಿಂದ ರವಿ ಸಂಗನಗೌಡ ಪಾಟೀಲ್ ಅವರನ್ನು ವರ್ಗಾಯಿಸಲಾಗಿದೆ. ಹಾಗಾಗಿ ಬೆಂಗಳೂರಿಗೆ ವರ್ಗಾವಾದರೂ ರಿಲೀವ್ ಆಗದೆ ಉಳಿದಿದ್ದ ಇನ್ಸ್‌ಪೆಕ್ಟರ್ ಅಂಜನ್ ಕುಮಾರ್ ಈಗ ರಿಲೀವ್ ಆಗಲಿದ್ದಾರೆ.
ಕೋಟೆ ಪೊಲೀಸ್ ಠಾಣೆ : ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದ ಚಂದ್ರಶೇಖರ್ ಎನ್.ಹರಿಹರ ಅವರನ್ನು ವರ್ಗಾಯಿಸಲಾಗಿದೆ.
ಇದನ್ನೂ ಓದಿ- ಜೈಲ್ ರಸ್ತೆ ಕರ್ಮಕಾಂಡ, 6 ತಿಂಗಳಿಗು ಹೆಚ್ಚು ಕಾಲ ನಡೆಯಿತು ಕಾಮಗಾರಿ, ಕೆಲವೇ ತಿಂಗಳಲ್ಲಿ ಬಿತ್ತು ಗುಂಡಿ
ಜಯನಗರ ಪೊಲೀಸ್ ಠಾಣೆ : ಖಾನಾಪುರ ಪೊಲೀಸ್ ಟ್ರೇನಿಂಗ್ ಸ್ಕೂಲ್‌ಗೆ ವರ್ಗಾವಣೆ ಆದೇಶದಲ್ಲಿದ್ದ ಹೆಚ್.ಎಂ.ಸಿದ್ದೇಗೌಡ ಅವರನ್ನು ವರ್ಗಾಯಿಸಲಾಗಿದೆ. ಈ ಹಿಂದೆ ಶಿವಮೊಗ್ಗ ಸಂಚಾರ ಠಾಣೆ ಇನ್ಸ್‌ಪೆಕ್ಟರ್ ಆಗಿ ಜವಾಬ್ದಾರಿ ನಿಭಾಯಿಸಿದ್ದರು.
ಸಾಗರ ಗ್ರಾಮಾಂತರ ಠಾಣೆ : ಐಎಸ್‌ಡಿ ಇನ್ಸ್‌ಪೆಕ್ಟರ್ ಆಗಿ ವರ್ಗಾವಣೆ ಆದೇಶದಲ್ಲಿದ್ದ ಸಿ.ಇ.ರೋಹಿತ್ ಅವರನ್ನು ವರ್ಗಾಯಿಸಲಾಗಿದೆ.
ಇನ್ನು, ಶಿವಮೊಗ್ಗದ ಡಿಸಿಆರ್‌ಬಿ ಡಿವೈಎಸ್‌ಪಿ ಆಗಿದ್ದ ಡಿ.ಟಿ.ಪ್ರಭು ಅವರನ್ನು ಸಿಐಡಿಗೆ ವರ್ಗಾಯಿಸಲಾಗಿದೆ.

LATEST NEWS
- ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್, ಏನೇನೆಲ್ಲ ಸ್ಟಾಲ್ಗಳಿವೆ?

- ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? – ಇಂದಿನ ಅಡಿಕೆ ಧಾರಣೆ

- ಹೊಟೇಲ್ ಮಾಲೀಕನಿಂದ ಕೊಲೆ, ಕಾರಿನಲ್ಲಿ ಮೃತದೇಹ ಸಾಗಿಸುವಾಗ ಪೊಲೀಸ್ ಬಲೆಗೆ

- Acting Registrar Appointed for Kuvempu University

About The Editor
ನಿತಿನ್ ಆರ್.ಕೈದೊಟ್ಲು
















